ರೈಲಿನಲ್ಲಿ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ 1.48 ಕೋಟಿ ರೂ. ನಗದು, ಚಿನ್ನಾಭರಣ ವಶ - Mahanayaka

ರೈಲಿನಲ್ಲಿ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ 1.48 ಕೋಟಿ ರೂ. ನಗದು, ಚಿನ್ನಾಭರಣ ವಶ

mangalore
25/01/2022

ಮಂಗಳೂರು: ಕೇರಳದಿಂದ ಮಂಗಳೂರಿಗೆ ಬಂದ ರೈಲಿನಲ್ಲಿ ಪ್ರಯಾಣಿಕನೋರ್ವ ದಾಖಲಾತಿ ಇಲ್ಲದೆ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ಸಾಗಿಸುತ್ತಿರುವುದನ್ನು ಮಂಗಳೂರು ರೈಲ್ವೆ ಪೊಲೀಸರು ಪತ್ತೆ ಹಚ್ಚಿ ಪ್ರಯಾಣಿಕನನ್ನು ಬಂಧಿಸಿದ್ದಾರೆ.

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಬಂದ ರೈಲನ್ನು ತಪಾಸಣೆ ನಡೆಸಿದಾಗ ಎಸ್ 4 ಸೀಟ್ ನಂಬರ್ 35 ರ ಪ್ರಯಾಣಿಕನ ಬಳಿ ಕಪ್ಪು ಬಣ್ಣದ ಬ್ಯಾಗ್ ಪತ್ತೆಯಾಗಿದೆ. ಈತ ಪನ್ವೇಕ್ ರೈಲು ನಿಲ್ದಾಣದಿಂದ ನಗರಕ್ಕೆ ಈ ರೈಲಿನಲ್ಲಿ ಬಂದಿದ್ದ. ಈತನ ಬಳಿ ಇದ್ದ ಕಪ್ಪು ಬಣ್ಣದ ಬ್ಯಾಗ್ ತಪಾಸಣೆ ನಡೆಸಿದಾಗ ಅದರಲ್ಲಿ 14 ಕೋಟಿ ರೂ. ನಗದು ಮತ್ತು 40 ಲಕ್ಷ ರೂ. ಮೌಲ್ಯದ 800 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ.

ಇವುಗಳಿಗೆ ಪ್ರಯಾಣಿಕನಲ್ಲಿ ಯಾವುದೇ ದಾಖಲಾತಿ ಇಲ್ಲದೆ ಇರುವುದರಿಂದ ರೈಲ್ವೆ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಧಿಕಾರಕ್ಕಾಗಿ ಮಠ ಕಟ್ಟುತ್ತಿದ್ದಾರೆ: ಸಚಿವ ನಿರಾಣಿ ವಿರುದ್ಧ ಬಿಜೆಪಿ ಶಾಸಕ ಯತ್ನಾಳ್​ ವ್ಯಂಗ್ಯ

ಸೇತುವೆಯಿಂದ ಕೆಳಗೆ ಬಿದ್ದ ಕಾರು: ಶಾಸಕನ ಮಗ ಸೇರಿ ಏಳು ವೈದ್ಯಕೀಯ ವಿದ್ಯಾರ್ಥಿಗಳು ಸಾವು

ಫುಟ್‌ ಬಾಲ್ ಪಂದ್ಯ ವೀಕ್ಷಿಸಲು ನೂಕು ನುಗ್ಗಲು: ಕಾಲ್ತುಳಿತದಲ್ಲಿ 6 ಸಾವು

‘ಸ್ಟುಪಿಡ್ ಸನ್ ಆಫ್​ ಎ..’ ಎಂದು ಪತ್ರಕರ್ತನಿಗೆ ನಿಂದಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

ಇತ್ತೀಚಿನ ಸುದ್ದಿ