ಅಕ್ಕನ ಬಾಯ್​ ಫ್ರೆಂಡ್​ ನಿಂದ ಬಾಲಕಿ ಮೇಲೆ ಅತ್ಯಾಚಾರ - Mahanayaka
4:01 PM Wednesday 11 - December 2024

ಅಕ್ಕನ ಬಾಯ್​ ಫ್ರೆಂಡ್​ ನಿಂದ ಬಾಲಕಿ ಮೇಲೆ ಅತ್ಯಾಚಾರ

rape1
29/03/2022

ಕೊಲ್ಕತ್ತಾ: 11 ವರ್ಷದ ಬಾಲಕಿಯ ಮೇಲೆ ಆಕೆಯ ಅಕ್ಕನ ಬಾಯ್​ಫ್ರೆಂಡ್ ಅತ್ಯಾಚಾರವೆಸಗಿ ಗುಪ್ತಾಂಗಕ್ಕೆ ಕೋಲು ತುರುಕಿ ಭೀಕರ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.

ಪರಗಣ ಜಿಲ್ಲೆಯ ಬಸಿರ್‌ಹತ್ ಬಳಿ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ ಬಾಲಕಿಯನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಬಾಲಕಿ ಪತ್ತೆಯಾದಾಗ ಆಕೆಗೆ ತೀವ್ರ ರಕ್ತಸ್ರಾವವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ಕೊಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೂಸ್ತಾನ್ ಟೈಮ್ಸ್‌ ವರದಿಯ ಪ್ರಕಾರ, ಆರೋಪಿ ಆ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವುದು ಮಾತ್ರವಲ್ಲದೆ ಆಕೆಯ ಗುಪ್ತಾಂಗದಲ್ಲಿ ಕೋಲು ಹಾಕಿ, ಹಾನಿಗೊಳಿಸಿದ್ದಾನೆ. ನಂತರ ಬಾಲಕಿಯನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದು ವೈದ್ಯರ ತಂಡದಿಂದ ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ದುರಂತ ಘಟನೆ ಬೆಳಕಿಗೆ ಬಂದ ನಂತರ ಪೊಲೀಸರು ಹೌರಾದ ಡೊಮ್ಜೂರ್ ಜಿಲ್ಲೆಯಿಂದ ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪಿಯನ್ನು ಬಂಧಿಸಿದ್ದಾರೆ. ಆರೊಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮತ್ತೆ ಪೆಟ್ರೋಲ್ ಡಿಸೇಲ್ ಏರಿಕೆ: ಇಂದು ಏರಿಕೆಯಾಗಿದ್ದು ಎಷ್ಟು?

ಮುಸ್ಲಿಂ ವ್ಯಾಪಾರಿಗಳ ಮೇಲೆ ನಿಷೇಧ ಹೇರಲು ಬಿಡುವುದಿಲ್ಲ: ಬಿಜೆಪಿ ಶಾಸಕ ಅನಿಲ್ ಬೆನಕೆ

ವಾಟ್ಸಾಪ್ ಗ್ರಾಹಕರಿಗೆ ಸಿಹಿ ಸುದ್ದಿ: ಬರುತ್ತಿದೆ ಹೊಸ ಅಪ್ಡೇಟ್

ಮಲಗಿದ್ದ ಬಾಲಕಿ ಮೇಲೆ ಟೆಂಪೋ ಹತ್ತಿಸಿದ ಚಾಲಕ: ಬಾಲಕಿ ಸಾವು

ಇತ್ತೀಚಿನ ಸುದ್ದಿ