ಮನೆಯವರೊಂದಿಗೆ ಸೇರಿ ಪ್ರೇಮಿಯ ಹತ್ಯೆ - Mahanayaka
4:10 PM Thursday 12 - December 2024

ಮನೆಯವರೊಂದಿಗೆ ಸೇರಿ ಪ್ರೇಮಿಯ ಹತ್ಯೆ

crime
06/03/2022

ಲಕ್ನೋ: ಉತ್ತರ ಪ್ರದೇಶದ ನೋಯ್ಡಾದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳು ಮನೆಯವರೊಂದಿಗೆ ಸೇರಿ ತನ್ನ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ಸೂರಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಲಿ ಗ್ರಾಮದಲ್ಲಿ ನಡೆದಿದೆ.

ಈ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾ. 1 ರಂದು ಸೂರಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಲಿ ಗ್ರಾಮದ ನಿವಾಸಿ ರಾಬಿನ್‌ನನ್ನು ಕೊಂದು ಶವವನ್ನು ಕಾಲುವೆಗೆ ಎಸೆಯಲಾಗಿತ್ತು. ಮೃತನನ್ನು ಆರೋಪಿ ಗೆಳತಿ ಮೋನಿಕಾ ಮತ್ತು ಆಕೆಯ ತಾಯಿ ಅಂಜು ಯಾವುದೋ ಕೆಲಸದ ನೆಪದಲ್ಲಿ ತಮ್ಮ ಮನೆಗೆ ಕರೆಸಿಕೊಂಡಿದ್ದರು. ನಂತರ ಅಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಳಿಕ ಮೃತ ರಾಬಿನ್ ಶವವನ್ನು ಆರೋಪಿ ಗೆಳತಿಯ ಸಹೋದರರು ಕಾಲುವೆಗೆ ಎಸೆದಿದ್ದಾರೆ ಎನ್ನಲಾಗಿದೆ.

ಫೆ. 27 ರಂದು ರಾತ್ರಿ 10 ಗಂಟೆ ಸುಮಾರಿಗೆ ರಾಬಿನ್ ಮನೆಯಿಂದ ಹೊರಗೆ ಹೋಗಿದ್ದು, ಮತ್ತೆ ಹಿಂದಿರುಗಲಿಲ್ಲ. ಈ ಬಗ್ಗೆ ರಾಬಿನ್ ಅವರ ಚಿಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದರು.
ಈ ಸಂಬಂಧ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು, ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ: ಅಮಿತ್ ಶಾ ವಿಶ್ವಾಸ

ಮೆಟ್ರೋ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಕಾರ್ಯಾಚರಣೆ ವೇಳೆ ನಾಲ್ಕನೇ ಅಂತಸ್ತಿನಿಂದ ಬಿದ್ದ ಅಗ್ನಿಶಾಮಕ ಸಿಬ್ಬಂದಿ

ಕಲುಷಿತ ನೀರು ಸೇವನೆ: 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ

 

 

ಇತ್ತೀಚಿನ ಸುದ್ದಿ