ಚಪ್ಪಲಿಯೊಳಗಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನ ಬಂಧನ
11/08/2022
ಮಂಗಳೂರು: ಅಕ್ರಮವಾಗಿ ಚಿನ್ನವನ್ನು ಚಪ್ಪಲಿಯೊಳಗಿಟ್ಟು ಸಾಗಾಟ ಮಾಡುತ್ತಿದ್ದ , ದುಬೈನಿಂದ ಆಗಮಿಸಿದ ಪ್ರಯಾಣಿಕನನ್ನು ಬಂಧಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನ ಸಾಗಾಟವನ್ನು ಪತ್ತೆ ಹಚ್ಚಿದ್ದಾರೆ.
ದುಬೈನಿಂದ ಬಂದಿಳಿದ ಕಾಸರಗೋಡಿನ ಪ್ರಯಾಣಿಕನನ್ನು ತಪಾಸಣೆ ಮಾಡಿದಾಗ 17.43 ಲಕ್ಷ ರೂಪಾಯಿ ಮೌಲ್ಯದ 24 ಕ್ಯಾರೆಟ್’ನ 332 ಗ್ರಾಂ ಚಿನ್ನವನ್ನು ತಾನು ಧರಿಸಿದ್ದ ಚಪ್ಪಲಿಯ ಒಳಭಾಗದಲ್ಲಿ ಅಂಟಿನ ಮಿಶ್ರಣದೊಂದಿಗೆ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka