ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ: ಯುವತಿಯ ಬಂಧನ
ಯುವತಿಯೋರ್ವಳು ಒಳ ಉಡುಪಿನಲ್ಲಿ ಚಿನ್ನವನ್ನು ಅಕ್ರಮವಾಗಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಭಾರಿ ಮೊತ್ತದ ಚಿನ್ನವನ್ನು ಕೇರಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು ಒಂದು ಕೋಟಿ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಕಾಸರಗೋಡಿನ 19 ವರ್ಷದ ಯುವತಿಯನ್ನು ಬಂಧಿಸಲಾಗಿದೆ. ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತಳನ್ನ 19 ವರ್ಷದ ಸೆಹಲಾ ಎಂದು ಗುರುತಿಸಲಾಗಿದೆ. ಈಕೆಯಿಂದ 1.884 ಕಿಲೋ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದ್ದು, ಮೂರು ಪ್ಯಾಕೆಟ್ ಗಳನ್ನು ಮಾಡಿ ಒಳ ಉಡುಪುನಲ್ಲಿ ಚಿನ್ನವನ್ನು ಹೊಲಿದು ಸಾಗಾಟ ಮಾಡುತ್ತಿದ್ದಳು. ಭಾನುವಾರ ರಾತ್ರಿ ದುಬಾಯಿಯಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಬಂದಿದ್ದ ಈಕೆ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದಳು.
ಆವಾಗ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನಾಭರಣ ಸಾಗಾಟ ಪತ್ತೆಯಾಗಿದೆ. ಲಗೇಜ್ ತಪಾಸಣೆ ನಡೆಸಿದರೂ ಚಿನ್ನಾಭರಣ ಪತ್ತೆಯಾಗಲಿಲ್ಲ. ಕೊನೆಗೆ ದೇಹ ತಪಾಸಣೆ ನಡೆಸಿದಾಗ ಒಳ ಉಡುಪಿನಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಚಿನ್ನಾಭರಣ ಪತ್ತೆಯಾಗಿದ್ದು, ಕೂಡಲೇ ಆಕೆಯನ್ನು ಬಂಧಿಸಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka