ಅಕ್ರಮವಾಗಿ ಗಾಂಜಾ ಸಾಗಾಟ: ಇಬ್ಬರು ಆರೋಪಿಗಳ ಬಂಧನ; 30 ಸಾವಿರ ಮೌಲ್ಯದ ಗಾಂಜಾ ವಶ
ಬೆಳ್ತಂಗಡಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಗಾಂಜಾ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ಕಾಸರಗೋಡು ನಿವಾಸಿಗಳಾಗಿರುವ ಮಹಮ್ಮದ್ ಅಶ್ರಫ್ (35) ಹಾಗೂ ಅಬ್ದುಲ್ ಲತೀಫ್ (36) ಎಂಬವರಾಗಿದ್ದಾರೆ. ಇವರಿಂದ ಸುಮಾರು ಮೂವತ್ತು ಸಾವಿರ ಮೌಲ್ಯದ 805 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ್ದ ರಿಕ್ಷಾವನ್ನೂ ವಶಪಡಿಸಿಕೊಳ್ಳಲಾಗಿದೆ.
ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಉದಯಗಿರಿ ಎಂಬಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ತಂಡ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಗೂಡ್ಸ್ ಆಟೋ ರಕ್ಷವನ್ನು ತಡೆದು ತಪಾಸಣೆ ನಡೆಸಿದಾಗ ರಿಕ್ಷಾದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ.
ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka