ಅಕ್ರಮ ಮರಳುಗಾರಿಕೆ ಧಕ್ಕೆಗೆದಾಳಿ : 2 ಟಿಪ್ಪರ್ ವಶ
ಉಡುಪಿ: ಕುಂದಾಪುರತಾಲೂಕು ಶಂಕರನಾರಾಯಣ ವ್ಯಾಪ್ತಿಯಭರತ್ಕಲ್ ಎಂಬಲ್ಲಿ ವಾರಾಹಿ ನದಿಯಿಂದ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆ, ಇಲಾಖೆಯ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು. ಮಾರ್ಗದರ್ಶನದಲ್ಲಿ ಭೂವಿಜ್ಞಾನಿ ಸಂಧ್ಯಾ ಅವರು ಶುಕ್ರವಾರ ಮುಂಜಾನೆ ಕಾರ್ಯಾಚರಣೆ ನಡೆಸಿ ಮರಳು ಧಕ್ಕೆಯಲ್ಲಿದ್ದ ಎರಡು ಲಾರಿಗಳನ್ನು ವಶಕ್ಕೆ ಪಡೆದರು.
ಈ ಬಗ್ಗೆ ಪ್ರಕರಣದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 2 ಲಾರಿ ಹಾಗೂ 5 ಮೆಟ್ರಿಕ್ ಟನ್ ಮರಳನ್ನು ಶಂಕರನಾರಾಯಣ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದೆ ಎಂದುಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಕಟಣೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw