ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಎಂದು ಅಕ್ಕನಿಂದಲೇ ತಮ್ಮನ ಹತ್ಯೆ! - Mahanayaka
5:13 AM Wednesday 11 - December 2024

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಎಂದು ಅಕ್ಕನಿಂದಲೇ ತಮ್ಮನ ಹತ್ಯೆ!

death
17/05/2022

ಹುಬ್ಬಳ್ಳಿ: ಪ್ರಿಯಕನ ಜೊತೆ ಅನೈತಿಕ ಸಂಬಂಧಕ್ಕೆ  ತಮ್ಮ ಅಡ್ಡಿ ಪಡಿಸುತ್ತಾನೆ ಈ ಹಿನ್ನೆಲೆಯಲ್ಲಿ ಸಹೋದರಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಒಡಹುಟ್ಟಿದ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ನಡೆದಿದೆ.

ಶಂಭುಲಿಂಗ ಕಮಡೊಳ್ಳಿ (35) ಕೊಲೆಯಾದ ಯುವಕ.ಬಸವ್ವ ನರಸಣ್ಣವರ ಹಾಗೂ ಆಕೆಯ ಪ್ರಿಯಕರ ಚನ್ನಪ್ಪ ಮರೆಪ್ಪ ಗೌಡರ ಕೊಲೆ ಮಾಡಿದ ದುಷ್ಕರ್ಮಿಗಳು. ಕಳೆದ ಎರಡು ದಿನಗಳ ಹಿಂದೆ ಶಂಭುಲಿಂಗನನ್ನು ಕೊಲೆ ಮಾಡಿದ  ಪ್ರಕರಣದಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ 48 ಗಂಟೆಯಲ್ಲಿಯೇ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

ಬಸವ್ವ ನರಸಣ್ಣವರ ಹಾಗೂ ಚನ್ನಪ್ಪ ಮರೆಪ್ಪಗೌಡರ ನಡುವೆ ಅನೈತಿಕ ಸಂಬಂಧವಿತ್ತು. ಅಕ್ಕನ ಅನೈತಿಕ ಸಂಬಂಧಕ್ಕೆ ಸಹೋದರ ಶಂಭುಲಿಂಗ ಕಮಡೊಳ್ಳಿ ಅಡ್ಡಪಡಿಸಿದ್ದ. ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿ ಹಿನ್ನೆಲೆಯಲ್ಲಿ ಬಸವ್ವ ತನ್ನ ಪ್ರಿಯಕರನ ಜೊತೆ ಸೇರಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಒಡಹುಟ್ಟಿದ ತಮ್ಮನನ್ನೇ ಕೊಲೆ ಮಾಡಿಸಿದ್ದಾಳೆ.

ಕೊಲೆ ಮಾಡಿ ಸಹೋದರನ ಶವದ ಮುಂದೆ ಕುಳಿತು ಕಣ್ಣೀರು ಹಾಕಿ ನಾಟಕವಾಡಿದ್ದಾಳೆ. ಆದರೆ ಚನ್ನಪ್ಪ ಮರೆಪ್ಪಗೌಡರ ಕೊಲೆ ಬಳಿಕ ಪರಾರಿಯಾಗಿದ್ದ. ಸದ್ಯ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಫ್ಯಾಟ್ ಸರ್ಜರಿ ವೇಳೆ ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ಸಾವು

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಎತ್ತಂಗಡಿ

ಶ್ರೀಗುರುದತ್ತಾತ್ರೇಯ ಪೀಠದ ಹೋಮ ನಡೆಯುವ ಸ್ಥಳದಲ್ಲಿ ನಾನ್ ವೆಜ್ ಊಟ, ಭಕ್ತರಿಂದ ಆಕ್ರೋಶ

ಮಗಳನ್ನು ಸಾಕಲು 36 ವರ್ಷಗಳಿಂದ ಪುರುಷ ವೇಷ ಧರಿಸಿ ಬದುಕುತ್ತಿರುವ ಮಹಿಳೆ!

ಇತ್ತೀಚಿನ ಸುದ್ದಿ