ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾ ಮಹಿಳೆಯ ಬಂಧನ
ಬೆಂಗಳೂರು: ಬಾಂಗ್ಲಾದೇಶದಿಂದ ಬಂದು ಭಾರತದಲ್ಲಿ ಅಕ್ರಮವಾಗಿ ನೆಲಸಿದ್ದ ಮಹಿಳೆಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ರೋನಿ ಬೇಗಂ 2006 -2007ರಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲಸಿದ್ದರು. ಅಲ್ಲದೆ, ಹಿಂದೂ ಸಂಪ್ರದಾಯದಂತೆ ಪಾಯಲ್ ಗೋಷ್ ಎಂದು ಹೆಸರು ಬದಲಾಯಿಸಿಕೊಂಡಿದ್ದರು. ಮಾಗಡಿ ರಸ್ತೆಯಲ್ಲಿ ಟೈಲರಿಂಗ್ ವೃತ್ತಿ ಮಾಡುತ್ತಿದ್ದ ಪಾಯಲ್ ಗೋಷ್, ಮುಂಬೈ ಮೂಲದ ನೀತಿನ್ ಕುಮಾರ್ ಎಂಬಾತನನ್ನು ವಿವಾಹವಾಗಿದ್ದರು ಎನ್ನಲಾಗಿದೆ.
ಇದೀಗ ಮತ್ತೆ ಬಾಂಗ್ಲಾದೇಶಕ್ಕೆ ಪ್ರಯಾಣ ಮಾಡುವಾಗ ಏರ್ಪೋರ್ಟ್ ಅಧಿಕಾರಿಗಳ ಪರಿಶೀಲನೆ ವೇಳೆ ಮಹಿಳೆ ಸಿಕ್ಕಿ ಬಿದ್ದಿದ್ದಾರೆ. ಈ ವೇಳೆ ನಕಲಿ ದಾಖಲೆ ಮುಖಾಂತರ ಓಟರ್ ಐಡಿ ಹಾಗೂ ಆಧಾರ್ ಕಾರ್ಡ್ ಸಹ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ವೆಸ್ಟ್ ಬೆಂಗಾಲ್ ಏರ್ಪೋರ್ಟ್ನಲ್ಲಿ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದ್ದು ಪಿ ಆರ್ ಆರ್ ಒ ಸೂಚನೆ ಮೇರೆಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಾರಿಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು
ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ
ಸಿದ್ದರಾಮಯ್ಯ ಮುಳುಗುತ್ತಿರುವ ಹಡಗು: ಸಚಿವ ಅಂಗಾರ
ವಾಟ್ಸಾಪ್ ಗ್ರೂಪ್ ಗೆ ಅಶ್ಲೀಲ ಫೋಟೋ ಹಾಕಿ ಪೇಚಿಗೆ ಸಿಲುಕಿದ ಬಿಜೆಪಿ ಮುಖಂಡ
ಅಂಬೇಡ್ಕರ್ ಪ್ರತಿಮೆಗೆ ಅವಮಾನ: ವಿಧಾನಸೌಧದ ಎದುರು ಸಂವಿಧಾನ ಪರ ಸಂಘಟನೆಗಳಿಂದ ಪ್ರತಿಭಟನೆ