ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ

ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ಓರ್ವನನ್ನು ಮಂಗಳೂರು ಏರ್ ಪೋರ್ಟ್ ನ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಭಟ್ಕಳ ಮೂಲದವರು ಎಂದು ತಿಳಿದುಬಂದಿದೆ. ಬಂಧಿತನಿಂದ 24 ಕ್ಯಾರೆಟ್ ನ 11.78 ಲಕ್ಷ ರೂಪಾಯಿ ಮೌಲ್ಯದ 224 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಟ್ಕಳ ಮೂಲದ ಪ್ರಯಾಣಿಕ ಅಂಡಾಕಾರದ ವಸ್ತುವಿನಲ್ಲಿ ಚಿನ್ನವನ್ನು ಅಕ್ರಮವಾಗಿ ತನ್ನ ದೇಹದ ಒಳಗೆ ಒಟ್ಟುಕೊಂಡು ಸಾಗಿಸುತ್ತಿದ್ದ ವೇಳೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka