ಅಕ್ಷರಸ್ಥರೇ ಇವತ್ತು ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಮೋಸ ಮಾಡುತ್ತಿದ್ದಾರೆ | ಡಾ.ಎಚ್.ಟಿ. ಪೋತೆ
ಕಲಬುರ್ಗಿ: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಭಾವನೆಗಳನ್ನು ಜೀವನದ ತತ್ವಗಳನ್ನಾಗಿ ಅಳವಡಿಸಿಕೊಂಡಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಕಂಡ ಪ್ರಜಾಪ್ರಭುತ್ವದ ಕನಸು ನನಸಾಗುತ್ತದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ.ಎಚ್.ಟಿ. ಪೋತೆ ಹೇಳಿದರು.
ಗುಲ್ಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಫ್ಲೆಕ್ಸ್ ಮತ್ತು ಭಾರತದ ಸಂವಿಧಾನದ ಪ್ರಿಯಾಂಬಲ್ ನ ಪ್ರತಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಜೀವನ ಚರಿತ್ರೆ ಹಾಗೂ ಅವರು ಸಾಗಿಸಿದ ಬದುಕು ಇಂದಿನ ಯುವಕರಿಗೆ ಪ್ರೇರಣೆಯಾಗಬೇಕು. ಆ ದಿಸೆಯಲ್ಲಿ ಯುವ ಜನತೆ ಒಂದಿಷ್ಟು ದೂರ ಕ್ರಮಿಸಿದ್ದಾರೆ. ಹಾಗಾಗಿ, ನಾವೆಲ್ಲರೂ ಸಮೃದ್ಧವಾಗಿ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಅಕ್ಷರಸ್ಥರೇ ಇವತ್ತು ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಮೋಸ ಮಾಡುತ್ತಿದ್ದೇವೆ. ಅವರ ಹಾಕಿ ಕೊಟ್ಟಿರುವ ಮಾರ್ಗದಲ್ಲಿ ಯಾರೂ ನಡೆಯುತ್ತಿಲ್ಲ. ಮನುಸ್ಮೃತಿ ಬದಿಗಿಟ್ಟು ಅಂಬೇಡ್ಕರ್ ಸ್ಮೃತಿ ಆಧಾರದ ಮೇಲೆ ಆಡಳಿತ ಮತ್ತು ಜೀವನ ನಡೆಸುವ ಸಂಕಲ್ಪ ತೊಟ್ಟಾಗ ಮಾತ್ರ ದೇಶದಲ್ಲಿ ಒಗ್ಗಟ್ಟು ಮೂಡಲು ಸಾಧ್ಯ ಎಂದು ಅವರು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಕೃಷ್ಣ ಬೆಣ್ಣೆ ಕದ್ದರೆ ತುಂಟಾಟ, ಈ ಬಾಲಕ ಹಸಿವಿನಿಂದ ತಿಂಡಿ ಕದ್ದರೆ ಅಪರಾಧವೇ? | ನ್ಯಾಯಾಧೀಶರ ಪ್ರಶ್ನೆ
ಪ್ರೀತಿಸಿ ವಿವಾಹವಾದ ಪತ್ನಿಗೆ ಅಕ್ರಮ ಸಂಬಂಧ | ಫೇಸ್ ಬುಕ್ ಲೈವ್ ಗೆ ಬಂದು ಪತಿ ಆತ್ಮಹತ್ಯೆ
ಚಿಕಿತ್ಸಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಲೈಂಗಿಕ ಕಿರುಕುಳ: ಮಾಲಿಕ ಸಹಿತ ಮೂವರು ಅರೆಸ್ಟ್
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಕ್ಯಾಂಪಸ್ ಫ್ರಂಟ್ ತಹಶೀಲ್ದಾರ್ ಕಚೇರಿಗೆ ಮಾರ್ಚ್