ಉಕ್ಕು ಕಾರ್ಖಾನೆ ಉಳಿಸಲು ಎಲ್ಲ  ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

cm bommai
09/02/2023

ಶಿವಮೊಗ್ಗ: ವಿಶ್ವೇಶ್ವರಯ್ಯ  ಉಕ್ಕು ಮತ್ತು ಕಬ್ಬಿಣ  ಕಾರ್ಖಾನೆಯನ್ನು ಉಳಿಸಲು ಎಲ್ಲ  ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ  ಎಲ್ಲರ ಸಹಕಾರ ಅಗತ್ಯವಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಬುಧವಾರ ತಮ್ಮನ್ನು ಭೇಟಿ ಮಾಡಿದ  ವಿ ಐ ಎಸ್ ಎಲ್ ಕಾರ್ಮಿಕರ ನಿಯೋಗದೊಂದಿಗೆ ಮಾತನಾಡಿದರು.

ವಿ ಐ ಎಸ್ ಎಲ್ ಅತ್ಯಂತ ಮಹತ್ವದ ಕಾರ್ಖಾನೆ.  ಜಾಗತೀಕರಣದ ಪರಿಣಾಮ ಅನೇಕ ಸಾರ್ವಜನಿಕ ಸಂಸ್ಥೆಗಳು ಮುಚ್ಚಿವೆ . ವಿ ಐ ಎಸ್ ಎಲ್ ಕಾರ್ಖಾನೆಯು  ಬಿ.ಎಸ್. ಯಡಿಯೂರಪ್ಪ ಅವರ ಪ್ರಯತ್ನದಿಂದ ಉಳಿದುಕೊಂಡು ಬಂದಿದೆ ಎಂದರು.

ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ ಕೇಂದ್ರ ಸರ್ಕಾರ ಡಿಸ್ಇನ್ವೆಸ್ಟ್ ಮೆಂಟ್ ಯೊಜನೆ ಅಡಿಯಲ್ಲಿ ಈ ಕಾರ್ಖಾನೆ ಮುಚ್ಚಲು ಪ್ರಕ್ರಿಯೆ ಆರಂಭಿಸಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ ಎಂದರು.

ನಮ್ಮ ರಾಜ್ಯದ ಕಬ್ಬಿಣದ ಅದಿರಿಗೆ ಸಾಕಷ್ಟು ಬೆಲೆ‌ ಇದೆ. ಜಿಂದಾಲ್ ಸಂಸ್ಥೆ ಅಷ್ಟು ದೊಡ್ಡ ಮಟ್ಟದಲ್ಲಿ ಬೆಳೆದಿರಬೇಕಾದರೆ, ಈ ಸಂಸ್ಥೆ ಉಳಿಸಲು ನಾವು ಪ್ರಯತ್ನ ಮಾಡುತ್ತೇವೆ. ಮೊದಲು ಕ್ಲೋಸರ್ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ ಮಾಡಲಾಗುವುದು. ಬೇರೆ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version