ನಾಯಿ ಮಾಂಸ ಸಾಗಾಟದ ಆರೋಪ: ಅಷ್ಟಕ್ಕೂ ಏನಿದು ಗಲಾಟೆ? - Mahanayaka
6:04 PM Wednesday 30 - October 2024

ನಾಯಿ ಮಾಂಸ ಸಾಗಾಟದ ಆರೋಪ: ಅಷ್ಟಕ್ಕೂ ಏನಿದು ಗಲಾಟೆ?

bangalore news
27/07/2024

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಎಂಬ ಆರೋಪದ ಹಿನ್ನೆಲೆ  ಸ್ಥಳಕ್ಕೆ  ಪೊಲೀಸರು ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ  ಬಾಕ್ಸ್‌ ನಲ್ಲಿ ತರಿಸಲಾಗಿದ್ದ ಮಾಂಸವನ್ನ ಜಪ್ತಿ ಮಾಡಲಾಗಿದ್ದು,  ಅಂಗಾಂಗ ಮಾದರಿಗಳನ್ನು  ಹೈದರಾಬಾದ್‌ ಪ್ರಯೋಗಾಲಯಕ್ಕೆ ಪರೀಕ್ಷೆ ನಡೆಸಲು ರವಾನೆ ಮಾಡಲಾಗಿದೆ.

ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ್ದೇವೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್ ಆಗಿ ಪಡೆದಿದ್ದೇವೆ. ಇದನ್ನು ವಿಸಿಕ್ಸ್ ಎನ್ನುವ ಲ್ಯಾಬ್‌ ಗೆ ರವಾನಿಸಿ ಪರೀಕ್ಷಿಸಲಾಗುತ್ತೆ. ಇದರ ವರದಿ ಬರೋದಕ್ಕೆ 14 ದಿನಗಳ ಕಾಲಾವಕಾಶ ಬೇಕು. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ ಎಂದು ಆಹಾರ ಸುರಕ್ಷತಾ ಅಧಿಕಾರಿಗಳು ತಿಳಿಸಿದ್ದಾರೆ.

ನಾಯಿ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಪುನೀತ್ ಕೆರೆಹಳ್ಳಿ ತಂಡ ಆರೋಪಿಸಿ, ಶುಕ್ರವಾರ ರಾತ್ರಿ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿ ಭಾರೀ ಹೈಡ್ರಾಮ ಸೃಷ್ಟಿಸಿದ್ದರು. ಈ ವೇಳೆ ಮುಸ್ಲಿಮ್ ಮುಖಂಡರ ಜೊತೆಗೆ ಭಾರೀ ವಾಗ್ವಾದ ನಡೆದಿತ್ತು. ಬಳಿಕ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧನದ ಬಳಿಕವೂ ಹೈಡ್ರಾಮ ನಡೆದಿದ್ದು, ಸದ್ಯ ಪುನೀತ್ ಕೆರೆಹಳ್ಳಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.

ಏನಾಗುತ್ತೆ ಈ ಕೇಸ್?

ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೇ ಮಾಲೀಕನ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ