ಅಕ್ರಮ ಸಾಗಾಟ ಆರೋಪ: 4 ಲಾರಿ, 1 ಹಿಟಾಚಿ, ಮರಳು ವಶ

ಮಂಗಳೂರಿನ ನೂತನ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಸೂಚನೆಯ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಪಣಂಬೂರು, ಕಂಕನಾಡಿ, ಉಳ್ಳಾಲ ಪೊಲೀಸರು ಮರಳು ಅಕ್ರಮ ಸಾಗಾಟ ಆರೋಪಕ್ಕೆ ಸಂಬಂಧಿಸಿದಂತೆ 4 ಲಾರಿ, 1 ಹಿಟಾಚಿ ಹಾಗೂ ಮರಳನ್ನು ವಶಕ್ಕೆ ಪಡೆದಿದ್ದಾರೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ಪಿಎಲ್ ಮೇಲ್ಸೇತುವೆ ಬಳಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 10 ಟನ್ ಮರಳು ಸಹಿತ 2 ಲಾರಿಗಳನ್ನು ಹಾಗೂ ಫೆ.26ರಂದು ತಣ್ಣೀರುಬಾವಿ ರಸ್ತೆಯಲ್ಲಿ ಸುಮಾರು 12-15 ಟನ್ ಮರಳನ್ನು ಹಾಗೂ ಅದರ ಸಾಗಾಟಕ್ಕೆ ಬಳಸಿದ 2 ಲಾರಿಗಳನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಡಂ ಕುದ್ರು ಎಂಬಲ್ಲಿ ಫೆ.28ರಂದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2 ಟಿಪ್ಪರ್ ಲಾರಿ ಮತ್ತು 2 ಯುನಿಟ್ನಷ್ಟು ಮರಳನ್ನು ವಶಪಡಿಸಿಕೊಂಡಿದ್ದಾರೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಸೋಮನಾಥ ಉಳಿಯ ದೇವಸ್ಥಾನದ ಬಳಿ ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಮಾ. 1ರಂದು ಬೆಳಗ್ಗೆ ದಾಳಿ ನಡೆಸಿ 10 ಲೋಡ್ ಮರಳು, 1 ಹಿಟಾಚಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮುಂದಿನ ಕ್ರಮಕ್ಕಾಗಿ ಮರಳು ಸಹಿತ ಲಾರಿಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರ ಸುಪರ್ದಿಗೆ ಒಪ್ಪಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw