ಹಾಡು ಕಾಪಿ ಹೊಡೆದ ಆರೋಪ: ನಟ ರಕ್ಷಿತ್​ ಶೆಟ್ಟಿ ವಿರುದ್ಧ ಎಫ್ ಐಆರ್ - Mahanayaka
3:29 PM Friday 20 - September 2024

ಹಾಡು ಕಾಪಿ ಹೊಡೆದ ಆರೋಪ: ನಟ ರಕ್ಷಿತ್​ ಶೆಟ್ಟಿ ವಿರುದ್ಧ ಎಫ್ ಐಆರ್

rakshith shetty
15/07/2024

ಬೆಂಗಳೂರು: ಕಾಪಿರೈಟ್​​ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್​ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ​ಐಆರ್​ ದಾಖಲಾಗಿದೆ.

ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಚಾರಣೆಗೆ ಹಾಜರಾಗಲು ಪೊಲೀಸರು ರಕ್ಷಿತ್ ಶೆಟ್ಟಿಗೆ  ಸೂಚನೆ ನೀಡಿದ್ದಾರೆ.

ಎಂಆರ್​​ ಟಿ ಮ್ಯೂಸಿಕ್ ​ನ ಪಾಲುದಾರಿಕೆ ಹೊಂದಿರುವ ನವೀನ್ ಕುಮಾರ್ ಅವರು ರಕ್ಷಿತ್ ಶೆಟ್ಟಿ ದೂರು ದಾಖಲು ಮಾಡಿದ್ದಾರೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


Provided by

ಹಾಡು ಬಳಕೆ ಸಂಬಂಧಿಸಿದಂತೆ 2024ರ ಜನವರಿಯಲ್ಲಿ ಮಾತುಕತೆ ನಡೆದಿತ್ತಂತೆ. ಆದರೆ, ಮಾತುಕತೆ ಸರಿ ಹೊಂದಿರಲಿಲ್ಲ ಎನ್ನಲಾಗಿದೆ. ಆದರೆ 2024ರ ಮಾರ್ಚ್​ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ಆದರೆ ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ.

ಸದ್ಯ  ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್​​ ದಾಖಲು ಮಾಡಲಾಗಿದೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರು ನೋಟಿಸ್ ನೀಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ