ಲಿಫ್ಟ್ ನೀಡುವ ನೆಪದಲ್ಲಿ ಆಹಾರದಲ್ಲಿ ಅಮಲು ಪದಾರ್ಥ ಬೆರೆಸಿ, ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ!
ಭೋಪಾಲ್: ಆಹಾರದಲ್ಲಿ ಅಮಲು ಪದಾರ್ಥ ಬೆರೆಸಿ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳನ್ನು ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಅತ್ಯಾಚಾರದ ದೃಶ್ಯವನ್ನು ವಿಡಿಯೋ ಮಾಡಿಕೊಂಡಿರುವ ಆರೋಪಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಆಗಸ್ಟ್ 14ರಂದು ಮಧ್ಯಪ್ರದೇಶದ ಭೋಪಾಲ್ ನ ನಿಷಾತ್ಪುರದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆ ದಿನ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಮನೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಬಂದಿದ್ದ ಆರೋಪಿಯು ಆಕೆಯನ್ನು ಕಾರಿನಲ್ಲಿ ಕರೆದೊಯ್ದಿದ್ದಾನೆ.
ದಾರಿ ಮಧ್ಯೆ ಯುವತಿಗೆ ಮಾದಕ ವಸ್ತು ಮಿಶ್ರಿತ ಆಹಾರ ನೀಡಿದ್ದು, ವಿದ್ಯಾರ್ಥಿನಿ ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಆಕೆಯನ್ನು ತನ್ನ ಅಪಾರ್ಟ್ ಮೆಂಟ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನೀಡಿ, ವಿಡಿಯೋ ಮಾಡಿಕೊಂಡಿದ್ದಾನೆ. ಬಳಿಕ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಘಟನೆ ಸಂಬಂಧ ವಿದ್ಯಾರ್ಥಿನಿಯು ಇಲ್ಲಿನ ಅಲ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ದೂರನ್ನು ನಿಶತಪುರ ಠಾಣೆಗೆ ವರ್ಗಾಯಿಸಲಾಗಿದೆ. ಸದ್ಯ ಪೊಲೀಸರು ಆರೋಪಿಗಾಗಿ ಶೋಧ ಆರಂಭಿಸಿದ್ದಾರೆ. ಆರೋಪಿಯ ನಿವಾಸಕ್ಕೆ ದಾಳಿ ನಡೆಸಿದ ಪೊಲೀಸರು ಶೋಧ ನಡೆಸಿದ್ದಾರೆ. ಆದರೆ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಶಶಿಕಲಾಗೆ ಮತ್ತೆ ಶಾಕ್: 100 ಕೋಟಿ ರೂಪಾಯಿ ಬೆಲೆ ಬಾಳುವ 11 ಆಸ್ತಿಗಳು ಜಪ್ತಿ
ಅನುಶ್ರೀ ವಿರುದ್ಧ ಮತ್ತೆ ವಿಚಾರಣೆ ನಡೆಯುವ ಸಾಧ್ಯತೆ ಕಡಿಮೆ | ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್
ಹೆದ್ದಾರಿಯ ಉದ್ದಕ್ಕೂ ಕಿಲೋ ಮೀಟರ್ ಗಟ್ಟಲೆ ಕಾಂಡಮ್ ಪತ್ತೆ | ಅಷ್ಟಕ್ಕೂ ನಡೆದದ್ದೇನು?
ಜಾತ್ಯತೀತ ಹೆಸರಿನಲ್ಲಿ ಮುಸ್ಲಿಮರನ್ನು ವಂಚಿಸಲಾಗುತ್ತಿದೆ | ಅಸಾದುದ್ದೀನ್ ಓವೈಸಿ ಆಕ್ರೋಶ
ಐದು ರಾಜ್ಯಗಳ ಚುನಾವಣಾ ಉಸ್ತುವಾರಿಗಳ ಹೆಸರು ಪ್ರಕಟಿಸಿದ ಬಿಜೆಪಿ: ಶೋಭಾ ಕರಂದ್ಲಾಜೆಗೂ ಸ್ಥಾನ
ರವಿಶಂಕರ್ ಗುರೂಜಿ ಆಶ್ರಮದವರಿಗೇ ಮಂಕುಬೂದಿ ಎರಚಿ ವಂಚಿಸಿದ ನಕಲಿ ಐಎಎಸ್ ಅಧಿಕಾರಿ!
12 ವರ್ಷದ ಬಾಲಕಿಯ ಮೇಲೆ ಮಲತಂದೆ, ನೆರೆ ಮನೆಯ ವ್ಯಕ್ತಿಯಿಂದ ಅತ್ಯಾಚಾರ!