ಅನಾರೋಗ್ಯದಿಂದ ಬೇಸತ್ತು ದುಡುಕಿನ ನಿರ್ಧಾರ ತೆಗೆದುಕೊಂಡ ವ್ಯಕ್ತಿ! - Mahanayaka
10:34 AM Thursday 12 - December 2024

ಅನಾರೋಗ್ಯದಿಂದ ಬೇಸತ್ತು ದುಡುಕಿನ ನಿರ್ಧಾರ ತೆಗೆದುಕೊಂಡ ವ್ಯಕ್ತಿ!

crime news
24/11/2022

ಕುಂದಾಪುರ: ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೋರ್ವರು‌ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಶೇಡಿಮನೆ ಗ್ರಾಮದಲ್ಲಿ ನ.23ರಂದು 5:30ಕ್ಕೆ ನಡೆದಿದೆ

ಮೃತರನ್ನು ಶೇಡಿಮನೆ ಗ್ರಾಮದ ರಾಜು ಪೂಜಾರಿ(54) ಎಂದು ಗುರುತಿಸಲಾಗಿದೆ. ಇವರು ಮದ್ಯ ಸೇವಿಸುವ ಚಟ ಹೊಂದಿದ್ದು, ಇದರಿಂದಾಗಿ 6 ತಿಂಗಳ ಹಿಂದೆ ಲಿವರ್ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದುಕೊಂಡರೂ ಸಂಪೂರ್ಣವಾಗಿ ಗುಣಮುಖವಾಗಿರುವುದಿಲ್ಲ. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು.

ರಾಜು ಅವರು, ನಿನ್ನೆ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ