ಗಾಂಜಾ ಮಾರಾಟ ಆರೋಪ: ಅಮೆಜಾನ್ ವಿರುದ್ಧ ದೂರು ದಾಖಲು

ಭಿಂಡ್: ಗಾಂಜಾ ಮಾರಾಟದ ಆರೋಪದಲ್ಲಿ ಅಮೆಜಾನ್ ವಿರುದ್ಧ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಾಬು ಟೆಕ್ಸ್ ಎಂಬ ಕಂಪೆನಿ ಅಮೇಜಾನ್ ಮೂಲಕ ಗಾಂಜಾ ಸರಬರಾಜು ಮಾಡುತ್ತಿತ್ತು ಎನ್ನುವ ಆರೋಪ ಕೇಳಿ ಬಂದಿದೆ.
ಇ—ಕಾಮರ್ಸ್ ಫ್ಲಾಟ್ ಫಾರ್ಮ್ ಮೂಲಕ ಗಾಂಜಾ ಮಾರಾಟದ ಆರೋಪವು ಕೇಳಿ ಬಂದ ಹಿನ್ನೆಲೆಯಲ್ಲಿ ಅಮೆಜಾನ್ ನ ಕಾರ್ಯ ನಿರ್ವಾಹಕ ನಿರ್ದೇಶಕರ ವಿರುದ್ಧ ದೂರು ದಾಖಲಾಗಿದೆ. ಅಮೆಜಾನ್ ನಲ್ಲಿ ‘ಬಾಬು ಟೆಕ್ಸ್’ ಎಂಬ ಹೆಸರಿನಲ್ಲಿ ಆರೋಪಿಗಳಾದ ತೋಮರ್ ಮತ್ತು ಸೂರಜ್ ಎಂಬವರು ಕಂಪೆನಿಯನ್ನು ಸ್ಥಾಪಿಸಿ ಅಮೆಜಾನ್ ನಲ್ಲಿ ರಿಜಿಸ್ಟರ್ ಮಾಡಿಸಿಕೊಂಡು ಗಾಂಜಾ ಮಾರಾಟ ಮಾಡಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ವಿಶಾಖಪಟ್ಟಣದಿಂದ ಬರುತ್ತಿದ್ದ ಗಾಂಜಾವನ್ನು ಹೋಮ್ ಡೆಲಿವರಿ ಮಾಡುವ ಮೂಲಕ ಆನ್ ಲೈನ್ ಮಾರಾಟ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡಿದ್ದು, ಇದರಿಂದಾಗಿ ಇದೀಗ ಅಮೆಜಾನ್ ಸಂಸ್ಥೆ ಸಂಕಷ್ಟಕ್ಕೀಡಾಗಿದೆ. ಅಮೆಜಾನ್ ನ ಕಾರ್ಯ ನಿರ್ವಾಹಕ ನಿರ್ದೇಶಕ ವಿರುದ್ಧ ಈ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶ್ರೀಕೃಷ್ಣ ಪರಮಾತ್ಮನ ಕೈ ತುಂಡಾಯಿತು ಎಂದು ವಿಗ್ರಹವನ್ನು ಆಸ್ಪತ್ರೆಗೆ ದಾಖಲಿಸಿದ ಅರ್ಚಕ
ಮಗುವಿಗೆ ಜನ್ಮ ನೀಡಿದ ಎಸೆಸೆಲ್ಸಿ ವಿದ್ಯಾರ್ಥಿನಿ | ಆರೋಪಿ ಅರೆಸ್ಟ್
50 ವರ್ಷಗಳ ಇತಿಹಾಸದಲ್ಲಿ ಇಂತಹ ಮಳೆ ನೋಡಿಲ್ಲ, 5 ಲಕ್ಷ ಪರಿಹಾರ ನೀಡುತ್ತೇವೆ | ಸಚಿವ ಡಾ.ಕೆ.ಸುಧಾಕರ್
ಅಪಾಯದ ಮಟ್ಟ ಮೀರಿ ಉಕ್ಕಿ ಹರಿದ ಪಂಬಾ ನದಿ: ಶಬರಿಮಲೆ ಯಾತ್ರೆ ನಿಷೇಧ
“ಕೃಷಿ ಕಾಯ್ದೆ ರದ್ದು ಮಾಡುವ ಪರಿಸ್ಥಿತಿ ಬಂದೇ ಬರುತ್ತದೆ” | ನಿಜವಾಯ್ತು ರಾಹುಲ್ ಗಾಂಧಿ ಹೇಳಿಕೆ
ಮಂಗಳೂರು: 1.92 ಕೋ.ರೂ. ಮೌಲ್ಯದ ಅಮಾನ್ಯ ನೋಟುಗಳು ಪತ್ತೆ