ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ ‘ಜೈ ಭೀಮ್’ ಬಹುನಿರೀಕ್ಷಿತ ಚಿತ್ರ
ಸಿನಿಡೆಸ್ಕ್: ತಮಿಳು ನಟ ಸೂರ್ಯ ಮತ್ತೊಂದು ಅದ್ಭುತವಾದ ಚಿತ್ರದೊಂದಿಗೆ ಸಿನಿ ಪ್ರೇಮಿಗಳ ಮುಂದೆ ಬಂದಿದ್ದು, ಸೂರರೈ ಪೋಟ್ರು ಚಿತ್ರದ ಯಶಸ್ಸಿನ ಬಳಿಕ ಇದೀಗ ಅವರ ಬಹುನಿರೀಕ್ಷಿತ ಚಿತ್ರ ‘ಜೈ ಭೀಮ್’ ಬಿಡುಗಡೆಯ ದಿನಾಂಕ ಪ್ರಕಟವಾಗಿದೆ.
ನವೆಂಬರ್ 2ರಂದು ಜೈ ಭೀಮ್ ಚಿತ್ರವು ಓಟಿಟಿ ಪಾರ್ಮ್ ನಲ್ಲಿ ಬಿಡುಗಡೆಯಾಗಲಿದೆ. ಅಮೆಜಾನ್ ಪ್ರೈಮ್ ಗೆ ಭೇಟಿ ನೀಡಿ ಜೈ ಭೀಮ್ ಚಿತ್ರವನ್ನು ಚಿತ್ರಪ್ರೇಮಿಗಳು ವೀಕ್ಷಿಸಬಹುದಾಗಿದೆ. ಸದ್ಯ ಚಿತ್ರದ ಪೋಸ್ಟರ್ ಹಾಗೂ ಬಿಡುಗಡೆ ದಿನಾಂಕವನ್ನು ನಟ ಸೂರ್ಯ ಬಿಡುಗಡೆ ಮಾಡಿದ್ದಾರೆ.
2ಡಿ ಎಂಟರ್ ಟೈನ್ ಮೆಂಟ್ ಬ್ಯಾನರ್ ಅಡಿಯಲ್ಲಿ ಸೂರ್ಯ ಹಾಗೂ ಅವರ ಪತ್ನಿ, ಖ್ಯಾತ ನಟಿ ಜ್ಯೋತಿಕಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಡುವ ವಕೀಲನ ಪಾತ್ರದಲ್ಲಿ ನಟ ಸೂರ್ಯ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ದೇಶಾದ್ಯಂತ ಹೊಸ ದಾಖಲೆ ಬರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ರಜಿಶಾ ವಿಜಯನ್ ಅವರು ಮಹಿಳಾ ಪ್ರಧಾನ ಪಾತ್ರವನ್ನು ಮಾಡಲಿದ್ದಾರೆ. ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ, ರಾವ್ ರಮೇಶ್, ಲಿಜೋ ಮೋಲ್ ಜೋಸ್ ಮೊದಲಾದ ಪ್ರಮುಖ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ದಕ್ಷಿಣ ಭಾರತದ ಎಲ್ಲ ಭಾಷೆಗಳಿಗೂ ಡಬ್ ಆಗಲಿದೆ ಎಂದು ಹೇಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ವಾಹನ ಚಲಾಯಿಸುತ್ತಿರುವ ವೇಳೆ ಹೆಡ್ ಫೋನ್, ಬ್ಲೂಟೂತ್ ಬಳಸಿದರೆ ದಂಡ ಖಚಿತ
ಪರೀಕ್ಷೆ ಮುಗಿಸಿ ಹೊರ ಬಂದ ಸಹಪಾಠಿಯ ಕತ್ತು ಸೀಳಿ ಕೊಂದ ಪ್ರೇಮಿ!
ಗರ್ಭಪಾತದ ವೇಳೆ ಅತ್ಯಾಚಾರ ಸಂತ್ರಸ್ತೆ ಸಾವು: ನಾಲ್ವರು ಅರೆಸ್ಟ್
ಕ್ಲಾಸ್ ನಲ್ಲಿ ಗಲಾಟೆ ಮಾಡಿದ ವಿದ್ಯಾರ್ಥಿಯ ಕಣ್ಣಿಗೆ ಪೆನ್ ಎಸೆದ ಶಿಕ್ಷಕಿಗೆ ಜೈಲು!
BSPಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು | ಕಾರ್ಯಕರ್ತರ ಸಮಾವೇಶದಲ್ಲಿ ರಾಮ್ಜೀ ಗೌತಮ್ ಕರೆ
ಸೊಸೆಗೆ ಚಾಕುವಿನಿಂದ ಚುಚ್ಚಿದ ಅತ್ತೆ: ಸೊಸೆ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಅತ್ತೆ ನೇಣಿಗೆ ಶರಣು