ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಒತ್ತಾಯ
ಸುಳ್ಯ: ಕೇಂದ್ರ ಸಚಿವ ಅಮಿತ್ ಶಾ ಸಂಸತ್ ನಲ್ಲಿ ಚರ್ಚೆ ಮಾಡುತ್ತಾ, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಎಂಬ ಹೆಸರು ಫ್ಯಾಶನ್ ಆಗಿದೆ ಅದರ ಬದಲು ದೇವರ ಹೆಸರನ್ನು ಹೇಳುತ್ತಿದ್ದರೆ, ಏಳೇಳು ಜನ್ಮಕ್ಕೂ ನೀವು ಸ್ವರ್ಗಕ್ಕೆ ಹೋಗುತ್ತಿದ್ದೀರಿ ಎಂದು ಹೇಳಿ ಅಂಬೇಡ್ಕರ್ ರವರಿಗೆ ಅಪಮಾನ ಮಾಡಿದ್ದಾರೆ ಅವರು ಸಂಸತ್ ಸ್ಥಾನಕ್ಕೆ ಹಾಗೂ ಕೇಂದ್ರ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಅಮಿತ್ ಶಾ ರಾಜೀನಾಮೆ ಪಡೆಯುವಂತೆ ಕರ್ನಾಟಕ ರಾಜ್ಯದ ರಾಜ್ಯಪಾಲರ ಮೂಲಕ ರಾಷ್ಟ್ರಪತಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತ್ತಡ್ಕ, ತಾಲೂಕು ಘಟಕದ ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಗ್ರಾಮ ಘಟಕದ ಅಧ್ಯಕ್ಷರಾದ ಹರೀಶ್ ಮೇನಾಲ, ನಾಗೇಶ್ ಬೂಡು ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: