ಆಗಸ್ಟ್ 23ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ- ಪರ್ಯಾಯ ರಾಜಕಾರಣದ ಕುರಿತು ಒಂದು ಸಂವಾದ ಕಾರ್ಯಕ್ರಮ
ತುಮಕೂರು: ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ-ಆರ್ ಪಿಐ(ಅಠವಳೆ) ಇದರ ಜಿಲ್ಲಾಮಟ್ಟದ ಕಾರ್ಯಕರ್ತರ ಕಾರ್ಯಾಗಾರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ ಮತ್ತು ಪರ್ಯಾಯ ರಾಜಕಾರಣದ ಕುರಿತು ಒಂದು ಸಂವಾದ ಆಗಸ್ಟ್ 23ರ ಸೋಮವಾರ ಬೆಳಗ್ಗೆ ಇಲ್ಲಿನ ಕನ್ನಡ ಭವನ, ಜಿಲ್ಲಾ ಕನ್ನಡ ಸಾಹಿತ್ಯ ಸಭಾಂಗಣದಲ್ಲಿ ನಡೆಯಲಿದೆ.
ಆರ್ ಪಿಐ ಮತ್ತು ಎಸ್ ಎಸ್ ಡಿ ಬೆಂಗಳೂರು ಇದರ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ನಡೆಸಲಿದ್ದಾರೆ. , ಸಮತ ಸೈನಿಕ ದಳದ ಜಿಲ್ಲಾಧ್ಯಕ್ಷ ಪಿ.ಧನರಾಜ್ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ಆರ್ ಪಿಐ ಜಿಲ್ಲಾ ಗೌರವಾಧ್ಯಕ್ಷರು ಹಾಗೂ ಸಾಹಿತಿಗಳಾದ ಎಂ.ರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ರಾಜಣ್ಣ(ಯಲದಬಾಗಿ) ಅವರು ನಿರೂಪಣೆ ಮಾಡಲಿದ್ದಾರೆ. ದಲಿತ ಸಂಘಟನೆಗಳ ಒಕ್ಕೂಟ ಪ್ರಧಾನ ಕಾರ್ಯದರ್ಶಿ ನಟರಾಜು ಜಿ.ಎಲ್. ಅವರು ಸ್ವಾಗತ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿವಿಧ ಸಂಘಟನೆಗಳ ಮುಖಂಡರಾದ ಪಿ.ಪಿಳ್ಳರಾಜು ಬೋಸಪ್ಪ, ಎ.ಗೋಪಾಲ್, ಇಂಡ್ಲವಾಡಿ ಬಸವರಾಜು, ಭವಾನಿ ಪ್ರಸಾದ್ ಜಾಲ ಕಿಟ್ಟಿ, ಹೇಮಂತ್ ಕೃಷ್ಣ(ಡೆಲ್ಲಿ), ಸುಗುಣ ಅಶ್ವತ್ಥ್ ಎಂ.ವಿಜಯಕುಮಾರ್(ಮಂಗಳ ಗ್ರಾಮ) ಇವರು ಭಾಗವಹಿಸಲಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟ ಪ್ರಧಾನ ಕಾರ್ಯದರ್ಶಿ ನಟರಾಜು ಜಿ.ಎಲ್. ತಿಳಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿದ್ದಾರೆ.
ಇನ್ನಷ್ಟು ಸುದ್ದಿಗಳು…
ಕೊವಿಡ್ ಮಾರ್ಗಸೂಚಿಗೆ ಅಂಜದೇ ಗಣೇಶೋತ್ಸವ ನಡೆಸಲು ಶಾಸಕ ಯತ್ನಾಳ್ ಕರೆ!
ವಿಡಿಯೋ ಮುಂದಿಟ್ಟುಕೊಂಡು ಬಿಜೆಪಿ ಮುಖಂಡ ಚಿ.ನಾ.ರಾಮು ವಿರುದ್ಧ ಮಹಿಳೆಯಿಂದ ಬ್ಲ್ಯಾಕ್ ಮೇಲ್ | ದೂರು ದಾಖಲು
ಜಿಮ್ ನಲ್ಲಿ ಜೊತೆಯಾಗಿ ವರ್ಕೌಟ್ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ!
ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ಪ್ರತಾಪ್ ಸಿಂಹ ಸಾಧನೆಯಲ್ಲ | ಹೆಚ್.ವಿಶ್ವನಾಥ್
ಮತ್ತೆ ಅಖಾಡಕ್ಕಿಳಿಯಲಿದ್ದಾರೆ WWE ಸೂಪರ್ ಸ್ಟಾರ್ ಸಿಎಂ ಫಂಕ್ | ಖುಷಿಯಲ್ಲಿ ಕಣ್ಣೀರು ಹಾಕಿದ ಅಭಿಮಾನಿಗಳು
ದೇವರಿಗೆ ಪೂಜೆ ಮಾಡಿದ್ರೂ, ಹೈಕಮಾಂಡ್ ಕದ ತಟ್ಟಿದ್ರೂ ಸಿಗಲಿಲ್ಲ ಆನಂದ!
ಪಾನಿಗೆ ಮೂತ್ರ ಮಾಡಿದ ಜಗ್ ಮುಳುಗಿಸಿದ ಪಾನಿಪುರಿ ಮಾರಾಟಗಾರ: ಈ ವೈರಲ್ ವಿಡಿಯೋದ ಘಟನೆ ಎಲ್ಲಿ ನಡೆದದ್ದು ಗೊತ್ತೆ?
ನೋ ಪಾರ್ಕಿಂಗ್ ನಲ್ಲಿದ್ದ ಸವಾರ ಸಹಿತ ಬೈಕ್ ನ್ನು ಹೊತ್ತೊಯ್ದ ಟ್ರಾಫಿಕ್ ಪೊಲೀಸರು!