ಡಾ.ಬಿ.ಆರ್.ಅಂಬೇಡ್ಕರ್ ಫ್ಲೆಕ್ಸ್ ಗೆ ಹಾನಿ: ಇಬ್ಬರು ಕಿಡಿಗೇಡಿಗಳ ಬಂಧನ
ಮಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಫ್ಲೆಕ್ಸ್ ಗೆ ಹಾನಿ ಮಾಡಿರುವ ಪ್ರಕರಣದ ಸಂಬಂಧ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಡಾ.ಬಿ. ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ಫ್ಲೆಕ್ಸ್ ಹಾಕಲಾಗಿದ್ದು, ಈ ಫ್ಲೆಕ್ಸ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದರು ಎಂದು ಹೇಳಲಾಗಿದೆ.
ಅಸೈಗೋಳಿ ನಿವಾಸಿ ದಾಮೋದರ ಎಂಬುವವರ ಪುತ್ರ ಶರಣ್ (24) ಹಾಗೂ ಹರೇಕಳದ ಗೋಪಾಲಕೃಷ್ಣ ಎಂಬುವವರ ಪುತ್ರ ಸುಜಿತ್ (26) ಬಂಧಿತ ಆರೋಪಿಗಳಾಗಿದ್ದಾರೆ.
ವರದಿಗಳ ಪ್ರಕಾರ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಫ್ಲೆಕ್ಸ್ ಗೆ ಹಾನಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಒಂದು ಕಣ್ಣಿನ ಮಗುವಿನ ಜನನ: ವಿಶ್ವದಲ್ಲೇ ಅಪರೂಪದ ಘಟನೆ
ದೆಹಲಿ ಗಲಭೆ: ನ್ಯಾಯಾಲಯದಿಂದ ಉಮರ್ ಖಾಲಿದ್ ಗೆ ಜಾಮೀನು ನಿರಾಕರಣೆ