ಡಾ.ಬಿ.ಆರ್‌.ಅಂಬೇಡ್ಕರ್‌ ಗೆ ಅವಮಾನ: ಸೂಕ್ತ ಕ್ರಮಕ್ಕೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ - Mahanayaka
11:02 AM Friday 20 - September 2024

ಡಾ.ಬಿ.ಆರ್‌.ಅಂಬೇಡ್ಕರ್‌ ಗೆ ಅವಮಾನ: ಸೂಕ್ತ ಕ್ರಮಕ್ಕೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ

mallikarjuna
28/01/2022

ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ರಾಯಚೂರು ಜಿಲ್ಲಾ ನ್ಯಾಯಾಧೀಶರು ಅವಮಾನ ಮಾಡಿದ್ದಾರೆ ಎಂದು ದೂರಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅವರಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗದ ಸದಸ್ಯ ಎಚ್‌.ವೆಂಕಟೇಶ್‌ ದೊಡ್ಡೇರಿ ಪತ್ರ ಬರೆದಿದ್ದಾರೆ.

ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಅಗೌರವ ತೋರಿಸಿದ್ದಾರೆ. ಜತೆಗೆ, ಕಾರ್ಯಕ್ರಮದ ಸ್ಥಳದಿಂದ ಭಾವಚಿತ್ರವನ್ನೂ ತೆಗೆದುಹಾಕಿಸಿದ್ದಾರೆ. ಮಾಧ್ಯಮಗಳು, ಸಾರ್ವಜನಿಕರು ಮತ್ತು ವಕೀಲರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ನ್ಯಾಯಾಂಗಕ್ಕೆ ಈ ಘಟನೆ ಕಪ್ಪು ಚುಕ್ಕೆಯಾಗಿದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಅವರ ಭಾವಚಿತ್ರವನ್ನಿಟ್ಟು ಗೌರವ ಸಲ್ಲಿಸಬೇಕು ಎಂದು ಕರ್ನಾಟಕ ಸರ್ಕಾರ 2020ರ ಜ. 25ರಂದು ನಿರ್ದೇಶನ ನೀಡಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


Provided by

ನ್ಯಾಯಾಲಯಗಳು ಸಹ ಭಾರತೀಯ ಸಂವಿಧಾನದ ಅಡಿಯಲ್ಲೇ ಕಾರ್ಯನಿರ್ವಹಿಸುತ್ತಿವೆ. ಸಂವಿಧಾನದ ಗೌರವ ಕಾಪಾಡುವ ಜವಾಬ್ದಾರಿಯನ್ನು ನ್ಯಾಯಾಲಯಗಳು ಹೊಂದಿದೆ. ಹೀಗಾಗಿ, ನ್ಯಾಯಾಲಯಗಳು ಅಂಬೇಡ್ಕರ್‌ ಅವರನ್ನು ಗೌರವಿಸುತ್ತವೆ ಎನ್ನುವುದನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಯಚೂರಿನಲ್ಲಿ ನಡೆದಿರುವ ಘಟನೆಯ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಜತೆಗೆ, ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಎಲ್ಲ ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಇರಿಸಲು ಕ್ರಮಕೈಗಳ್ಳಬೇಕು ಎಂದು ಕೋರಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

3 ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಯತ್ನ: ಆರೋಪಿಯ ಸೆರೆ; ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಝೊಮೆಟೋ ಡೆಲಿವರಿ ಬಾಯ್ ಹೊಟೇಲ್ ಸಿಬ್ಬಂದಿ ನಡುವೆ ಮಾರಾಮಾರಿ!

ಸಂವಿಧಾನದ ಪೀಠಿಕೆಯ ಅವಹೇಳನ | ಝೋಮೇಟೋದಿಂದ ಸಂವಿಧಾನದ ಪುಟ ವಿನ್ಯಾಸದ ದುರ್ಬಳಕೆ 

ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆಯಿಂದ ಗೂಸಾ

ಸಾಲ ಬಾಧೆಯಿಂದ ಬೇಸೆತ್ತು ದಂಪತಿ ಆತ್ಮಹತ್ಯೆಗೆ ಶರಣು

 

ಇತ್ತೀಚಿನ ಸುದ್ದಿ