ಮಂಗಳೂರು: ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಮಂಗಳೂರು: ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮಂಗಳೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ, ಭೀಮ್ ರಾವ್ ಅಂಬೇಡ್ಕರ್ ರವರ 134ನೇ ಜಯಂತಿಯನ್ನು ಆಚರಿಸಲಾಯಿತು.
ಮಂಗಳೂರಿನ ಅಂಬೇಡ್ಕರ್ ವೃತ್ತದಲ್ಲಿರುವ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಂಬೇಡ್ಕರ್ ವೃತ್ತಕ್ಕೆ ನಿಗದಿತ ಜಾಗದಲ್ಲಿ ಸುಂದರವಾದ ಅಂಬೇಡ್ಕರ್ ರವರ ಕಂಚಿನ ಪ್ರತಿಮೆಯೊಂದಿಗೆ ಸುಸಜ್ಜಿತವಾದ ವೃತ್ತ ನಿರ್ಮಾಣ ಕಾರ್ಯ ಪ್ರಾರಂಭಿಸುವಂತೆ ಆಗ್ರಹಿಸಲಾಯಿತು.
ಕಾರ್ಯಕ್ರಮದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಮುಖಂಡರಾದ ಎಂ.ದೇವದಾಸ್, ಚಂದ್ರ ಕುಮಾರ್, ರಮೇಶ್ ಕೋಟ್ಯಾನ್, ಅಶೋಕ್ ಕೊಂಚಾಡಿ, ಸುಧಾಕರ್ ಬೋಳೂರು, ರಮೇಶ್ ಕುಮಾರ್ ಕಾವೂರು, ಜಗದೀಶ್ ಪಾಂಡೇಶ್ವರ್, ಪ್ರೇಮ್ ನಾಥ್ ಬಳ್ಳಾಲ್ ಬಾಗ್, ಕಮಲಾಕ್ಷ ಬಜಾಲ್, ಅಮಲ ಜ್ಯೋತಿ, ಗಣೇಶ್ ಸೂಟರ್ ಪೇಟೆ, ರಾಮದಾಸ್ ಮೇರೇಮಜಲ್, ವಿಶ್ವನಾಥ್ ಚಿತ್ರಪು, ಬಾಬು ಚಲವಾದಿ, ಜಗದೀಶ್ ಸೂಟರ್ ಪೇಟೆ ಮೊದಲಾದವರು ಭಾಗವಹಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: