ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಪೇಜಾವರ ಶ್ರೀ ನಿರಾಕರಿಸಿದ್ದರು | ಜ್ಞಾನಪ್ರಕಾಶ ಸ್ವಾಮೀಜಿ - Mahanayaka

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಪೇಜಾವರ ಶ್ರೀ ನಿರಾಕರಿಸಿದ್ದರು | ಜ್ಞಾನಪ್ರಕಾಶ ಸ್ವಾಮೀಜಿ

jnanaprakash swamiji
26/11/2021

ಬೆಂಗಳೂರು: ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಎಂದಾಗ ಪೇಜಾವರ ಶ್ರೀಗಳು ನಿರಾಕರಿಸಿದ್ದರು. ಈ ನೆಲದ ಕಾನೂನಿಗೆ ಅವರು ಅಪಮಾನ ಮಾಡಿಲ್ಲವೇ? ಒಂದು ಲೋಟ ಮಜ್ಜಿಗೆಯಾದರೂ ತೆಗೆದುಕೊಳ್ಳಿ ಎಂದಾಗ ಬೇಡ ಎಂದಿದ್ದರು. ಹಾಗಾದರೆ ಅವರ ಪಾದಯಾತ್ರೆ ಬೂಟಾಟಿಕೆ ಅಲ್ವಾ? ಎಂದು ಜ್ಞಾನಪ್ರಕಾಶ ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಫ್ರೀಡಂ ಪಾರ್ಕ್ ನಲ್ಲಿ ಹೇಳಿಕೆ ನೀಡಿದ ಜ್ಞಾನಪ್ರಕಾಶ ಸ್ವಾಮೀಜಿ,  ದಲಿತರ ಕಾಲನಿಯಲ್ಲಿ ಪಾನಕ, ಮಜ್ಜಿಗೆ ತೆಗೆದುಕೊಳ್ಳಿ ಎಂದು ಅವರನ್ನು ಕೇಳಿದರೂ ಅವರು ತೆಗೆದುಕೊಂಡಿಲ್ಲ. ಹಾಗಾದರೆ ಅವರ ಪಾದಯಾತ್ರೆ ಬೂಟಾಟಿಕೆ ಅಲ್ವಾ? ಹಂಸಲೇಖ ಹೇಳಿದ ಮಾತಿನಲ್ಲಿ ಏನು ತಪ್ಪಿದೆ ಎಂದು  ಜ್ಞಾನಪ್ರಕಾಶ ಸ್ವಾಮೀಜಿ ಪ್ರಶ್ನಿಸಿದರು.

ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಡೆದ ಸಭೆಯಲ್ಲಿ ಹಂಸಲೇಖ ಅವರು ನೀಡಿರುವ ಹೇಳಿಕೆಯ ಬಗ್ಗೆ ಬ್ರಾಹ್ಮಣ ಸಂಘಟನೆಯೊಂದು ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಹಂಸಲೇಖ ಅವರು ಕ್ಷಮೆಯಾಚಿಸಿದ ಬಳಿಕವೂ ಅವರ ಮೇಲೆ ದ್ವೇಷಕಾರುತ್ತಿರುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸಂವಿಧಾನ ಪ್ರೇಮಿಗಳು ಸಿಡಿದೆದ್ದು, ಹಂಸಲೇಖ ಅವರಿಗೆ ಭಾರೀ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಂದು ಸ್ಲೇಟ್ ನಲ್ಲಿ ಎಳೆನೀರು ರೇಟ್, ಇನ್ನೊಂದು ಸ್ಲೇಟ್ ನಲ್ಲಿ ‘ಬಡವ ರಾಸ್ಕಲ್’ ಡೇಟ್!

ಸರ್ಕಾರಿ ಲೈಬ್ರೆರಿಗಳಲ್ಲಿ ಅಂಬೇಡ್ಕರ್ ಪುಸ್ತಕಗಳ ಬಗ್ಗೆ ಯಾಕೆ ಈ ಅಸಡ್ಡೆ?

‘ಜೈಭೀಮ್’ ಸಿನಿಮಾ ಹೋಲುವ ಪ್ರಕರಣ | ತನ್ನ 3 ಮಕ್ಕಳ ಕೊಲೆಗೆ 19 ವರ್ಷಗಳ ಬಳಿಕ ನ್ಯಾಯ ಪಡೆದ ತಂದೆ!

ಬೆಂಗಳೂರಿನಲ್ಲಿ ಎರಡು ಬಾರಿ ಭೂಕಂಪನದ ಅನುಭವ: ಮಂಡ್ಯದಲ್ಲಿ ಕೇಳಿ ಬಂತು ನಿಗೂಢ ಶಬ್ಧ!

ವರದಕ್ಷಿಣೆ ನೀಡಲು ಕೂಡಿಟ್ಟಿದ್ದ 75 ಲಕ್ಷ ರೂ. ಹಣವನ್ನು ಹಾಸ್ಟೆಲ್ ನಿರ್ಮಾಣಕ್ಕೆ ದಾನ ಮಾಡಿದ ಯುವತಿ!

“ಓ ಮಾರಿಕೊಂಡ ಮಾಧ್ಯಮಗಳೇ, ಹಂಸಲೇಖ ನೀಡಿದ್ದು ‘ವಿವಾದಾತ್ಮಕ ಹೇಳಿಕೆ’ ಅಲ್ಲ” | ಚಾಟಿ ಬೀಸಿದ ಖ್ಯಾತ ಕಾರ್ಟೂನಿಸ್ಟ್ ದಿನೇಶ್ ಕುಕ್ಕುಜಡ್ಕ

ಇತ್ತೀಚಿನ ಸುದ್ದಿ