ಅಂಬೇಡ್ಕರ್ ವಿಚಾರಧಾರೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಬೆದರಿಕೆ: ಶಿಕ್ಷಕ ಅಮಾನತು

ambedkar
19/04/2022

ಮಡಿಕೇರಿ: ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆ ಮಾತನಾಡದಂತೆ ವಿದ್ಯಾರ್ಥಿಗೆ ಜೀವ ಬೆದರಿಕೆ ಒಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಿಕ್ಷಕನೊಬ್ಬನನ್ನು  ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ.

ಸೋಮವಾರಪೇಟೆ ತಾಲೂಕು ಕಲ್ಕಂದೂರು ಸ.ಕಿ.ಪ್ರಾ. ಶಾಲೆ ಸಹಶಿಕ್ಷಕ ಧರ್ಮರಾಜ್ ಅಮಾನತುಗೊಂಡ ಶಿಕ್ಷಕನಾಗಿದ್ದು, ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಅಂತಿಮ ವರ್ಷದ ವಿದ್ಯಾರ್ಥಿ ಅಭಿಲಾಷ್ ಅಂಬೇಡ್ಕರ್ ಜಯಂತಿಯಂದು ವಿದ್ಯಾರ್ಥಿ ನಿಲಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ವಿಚಾರಧಾರೆ ಬಗ್ಗೆ ಮಾತನಾಡಿದ್ದರು. ಇದನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಪೋಸ್ಟ್ ಮಾಡಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಅಭಿಲಾಷ್ ಗೆ ಕರೆ ಮಾಡಿದ್ದ ಧರ್ಮರಾಜ್, ಜೀವ ಬೆದರಿಕೆ ಒಡ್ಡಿದ್ದರು. ಈ ಆಡಿಯೋ ವೈರಲ್ ಆದ ಬೆನ್ನಲ್ಲೇ ಅನುಚಿತ ವರ್ತನೆ ಆರೋಪದಲ್ಲಿ ಧರ್ಮರಾಜ್ ನನ್ನು  ಕೊಡಗು ಜಿಲ್ಲಾಧಿಕಾರಿ ಸೂಚನೆಯ ಮೇರೆಗೆ ಡಿಡಿಪಿಐ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ದೇಶದ್ರೋಹದ ಕೇಸ್ ದಾಖಲಿಸಲು ಒತ್ತಾಯ!

ಇತ್ತೀಚೆಗೆ ಅಂಬೇಡ್ಕರ್ ಅವರಿಗೆ ಅವಮಾನ ಮಾಡುತ್ತಿರುವಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಇಂತಹ ಘಟನೆಗಳು ನಡೆದಾಗ ಸರ್ಕಾರ ಸರ್ಕಾರಿ ಅಧಿಕಾರಿಗಳನ್ನು ಕೇವಲ ಅಮಾನತು ಮಾಡಿ ಸುಮ್ಮನಾಗುತ್ತಿದ್ದು, ಹೀಗಾಗಿ ಇಂತಹ ಘಟನೆಗಳು ಪುನರಾವರ್ತನೆಯಾಗುತ್ತಿದೆ. ಹಾಗಾಗಿ ಶಿಕ್ಷಕನನ್ನು ಕೇವಲ ಅಮಾನತು ಮಾಡುವುದಲ್ಲ, ದೇಶದ ಸಂವಿಧಾನ ಶಿಲ್ಪಿಯ ವಿರುದ್ಧ ಮಾತನಾಡಿರುವ ಈತನ ವಿರುದ್ಧ ದೇಶದ್ರೋಹ ಕೇಸ್ ಹಾಕಬೇಕು ಮತ್ತು ಯುಎಪಿಎ ಅಡಿಯಲ್ಲಿ ಬಂಧಿಸಬೇಕು ಎಂದು ವ್ಯಾಪಕ ಆಕ್ರೋಶ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪತಿ ಅಪಘಾತದಲ್ಲಿ ಸಾವು: ಪುತ್ರನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ

ಕಸದ ಲಾರಿಗೆ ಮತ್ತೊಂದು ಬಲಿ:  ಬೈಕ್ ನಲ್ಲಿ ಹೋಗುತ್ತಿದ್ದ ಮಹಿಳೆಯ ದಾರುಣ ಸಾವು

ಮಠಗಳಿಂದ ಕಮಿಷನ್ ವಸೂಲಿ: ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ತಾಳಿಕಟ್ಟುವ ಶುಭ ವೇಳೆ, ವರನನ್ನು ಎತ್ತಾಕೊಂಡು ಹೋದ ಪೊಲೀಸರು!

ಶಾಲೆಯ ಎದುರೇ 10ನೇ ತರಗತಿಯ ವಿದ್ಯಾರ್ಥಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಸ್ನೇಹಿತರು

 

 

ಇತ್ತೀಚಿನ ಸುದ್ದಿ

Exit mobile version