ಅಂಬೇಡ್ಕರ್ ಗೆ ಅವಮಾನ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಎನ್.ಮಹೇಶ್ ಆಕ್ರೋಶ
ಕೊಳ್ಳೇಗಾಲ: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಅಂಬೇಡ್ಕರ್ ಫೋಟೋ ತೆರವುಗೊಳಿಸಿ ಉದ್ಧಟತನ ಮೆರೆದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂಬೇಡ್ಕರ್ ಅವರ ಫೋಟೋವನ್ನು ತೆಗೆಸಿರುವುದು ನ್ಯಾಯಾಧೀಶರ ಸ್ಥಾನಕ್ಕೆ ಅಗೌರವವಾಗಿದ್ದು, ಅಂಬೇಡ್ಕರ್ ಫೋಟೋ ತೆಗೆದು ಜಡ್ಜ್ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ. ಸರ್ಕಾರದ ಆದೇಶಗಳು ಕೋರ್ಟ್ ಗೆ ಅನ್ವಯಿಸುವುದಿಲ್ಲವೇ? ಎಂದು ಪ್ರಶ್ನಿಸಿದ ಅವರು ನ್ಯಾಯಾಧೀಶರ ವಿರುದ್ಧ ತಕ್ಷಣವೇ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎನ್.ಮಹೇಶ್ ಆಗ್ರಹಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಫೋಟೋ ಹಾಕಲು ಆದೇಶವಿಲ್ಲ ಎಂದು ವಾದಿಸುತ್ತಿರುವ ನ್ಯಾಯಾಧೀಶರಿಗೆ, ಮಹಾತ್ಮ ಗಾಂಧೀಜಿಯ ಫೋಟೋ ಹಾಕಲು ಆದೇಶ ಇದೆಯಾ? ಎಂದು ಪ್ರಶ್ನಿಸಿದ ಅವರು, ಇದು ಸಂವಿಧಾನ ಬರೆದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ ಎಂದು ನ್ಯಾಯಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಎನ್.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಯುವತಿಯ ಅಪಹರಣ: ಲೈಂಗಿಕ ದೌರ್ಜನ್ಯವೆಸಗಿ ಬೀದಿಯಲ್ಲಿ ಮೆರವಣಿಗೆ
ಶಾಸಕ ಎಂ.ಪಿ. ಕುಮಾರಸ್ವಾಮಿಯಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ
ಡಾ.ಬಿ.ಆರ್.ಅಂಬೇಡ್ಕರ್ ಗೆ ಅವಮಾನ: ಸೂಕ್ತ ಕ್ರಮಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ
3 ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಯತ್ನ: ಆರೋಪಿಯ ಸೆರೆ; ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು