2 ಗಂಟೆ ತಡವಾಗಿ ಬಂದ ಆ್ಯಂಬುಲೆನ್ಸ್: ಹೊಟ್ಟೆನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಸಾವು
108 ಆಂಬ್ಯುಲೆನ್ಸ್ ಬರುವುದು ವಿಳಂಬವಾದ ಕಾರಣ 23 ವರ್ಷದ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಸೋಮವಾರ ತಮಿಳುನಾಡಿ ವಿಲ್ಲುಪುರಂ ಜಿಲ್ಲೆಯ ತಿರುವೆನ್ನೈನಲ್ಲೂರು ತಾಲೂಕಿನಲ್ಲಿ ನಡೆದಿದೆ.
ಮಂಡಗಮೇಡು ಗ್ರಾಮದ ನಿವಾಸಿ ಟಿ. ಸಂಧ್ಯಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. 4 ತಿಂಗಳ ಗರ್ಭೀಣಿಯಾಗಿದ್ದ ಸಂಧ್ಯಾ ಅವರಿಗೆ ಭಾನುವಾರ ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಆಕೆಯನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಆಕೆಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ, ಮುಂಡಿಯಂಬಕ್ಕಂ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲು ವೈದ್ಯರು ಶಿಫಾರಸು ಮಾಡಿದ್ದಾರೆ.
ಸಂಧ್ಯಾ ಅವರ ಕುಟುಂಬವು 12.30ಕ್ಕೆ 108 ಕ್ಕೆ ಕರೆ ಮಾಡಿ ಆಂಬ್ಯುಲೆನ್ಸ್ ಒದಗಿಸುವಂತೆ ಹೇಳಿದೆ. ಆದರೆ, ಆಂಬ್ಯುಲೆನ್ಸ್ ಎರಡು ಗಂಟೆಗಳ ನಂತರ 2.30ಕ್ಕೆ ಬಂದಿದೆ ಮತ್ತು ಆ ಹೊತ್ತಿಗೆ ಸಂಧ್ಯಾ ಅವರ ಸ್ಥಿತಿ ಹದಗೆಟ್ಟಿತ್ತು. ಬಳಿಕ ಗ್ರಾಮದಿಂದ 15 ಕಿಲೋಮೀಟರ್ ದೂರದಲ್ಲಿರುವ ಮುಂಡಿಯಂಬಕ್ಕಂ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಸಂಧ್ಯಾ ಅವರ ಕುಟುಂಬವು ಆಂಬ್ಯುಲೆನ್ಸ್ ಸೇವೆಯ ಕೊರತೆ ಬಗ್ಗೆ ತಿರುವೆನ್ನೈನಲ್ಲೂರು ಪೊಲೀಸರಲ್ಲಿ ಪ್ರಕರಣ ದಾಖಲಿಸಿದೆ. ಆಂಬ್ಯುಲೆನ್ಸ್ ಆಗಮನದಲ್ಲಿ ವಿಳಂಬಕ್ಕೆ ಕಾರಣವೇನು ಮತ್ತು ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಯಾವುದೇ ಪ್ರಯತ್ನಗಳು ನಡೆದಿವೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಘಟನೆ ಸಂಬಂಧ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw