ಆಂಬುಲೆನ್ಸ್ ಬಸ್ ನಡುವೆ ಭೀಕರ ಅಪಘಾತ: ರೋಗಿ ಸಹಿತ ನಾಲ್ವರಿಗೆ ಗಾಯ
08/10/2022
ಮಂಗಳೂರು: ಆಂಬುಲೆನ್ಸ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಆಂಬುಲೆನ್ಸ್ ಚಾಲಕ ಗಾಯಗೊಂಡು ರೋಗಿ ಅಪಾಯದಿಂದ ಪಾರಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರದ ಕುಲಶೇಖರದಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಆಂಬುಲೆನ್ಸ್ ನಜ್ಜುಗುಜ್ಜಾಗಿದೆ. ಆಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ಆಂಬುಲೆನ್ಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ರೋಗಿ, ಚಾಲಕನ ಸಹಿತ ಒಟ್ಟು ನಾಲ್ವರಿಗೆ ಅಪಘಾತದಲ್ಲಿ ಗಾಯವಾಗಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka