ಅಮೆರಿಕದಲ್ಲಿ ತುರ್ತು ಪರಿಸ್ಥಿತಿ ಹೇರಿದ ಡೊನಾಲ್ಡ್ ಟ್ರಂಪ್!
13/01/2021
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಜನವರಿ 20ರಂದು ಜೋಬಿಡೆನ್ ಅಧಿಕಾರ ಸ್ವೀಕರಿಸಬೇಕಿತ್ತು. ಆದರೆ, ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ನಡುವೆ ತುರ್ತು ಪರಿಸ್ಥಿತಿ ಹೇರಿದ್ದಾರೆ.
ಜನವರಿ 24ರವರೆಗೆ ವಾಷಿಂಗ್ಟನ್ ನಲ್ಲಿ ತುರ್ತುಪರಿಸ್ಥಿತಿ ಹೇರಲಾಗಿದೆ. ಜೋ ಬಿಡೆನ್ ಅಧಿಕಾರ ಸ್ವೀಕಾರದ ವೇಳೆ ಟ್ರಂಪ್ ಬೆಂಬಲಿಗರು ಹಿಂಸಾಚಾರ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 2 ವಾರಗಳ ವರೆಗೆ ತುರ್ತು ಪರಿಸ್ಥಿತಿ ಇರಲಿದೆ ಎಂದು ವೈಟ್ ಹೌಸ್ ಪ್ರಕಟಣೆ ತಿಳಿಸಿದೆ.
ಇನ್ನು ವಾಷಿಂಗ್ಟನ್ನ ತುರ್ತು ಪರಿಸ್ಥಿತಿ ವೇಳೆ ಜನರಿಗೆ ತೊಂದರೆಯಾಗದಂತೆ, ಆಸ್ತಿಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಲು ಆಂತರಿಕ ಭದ್ರತಾ ವಿಭಾಗ ಹಾಗೂ ಫೆಡರಲ್ ಎಮರ್ಜೆನ್ಸಿ ಮ್ಯಾನೇಜ್ಮೆಂಟ್ ಏಜೆನ್ಸಿಗೆ (ಎಫ್ಇಎಂಎ) ಸೂಚನೆ ನೀಡಲಾಗಿದೆ.