ತಮಿಳುನಾಡಿನಲ್ಲಿ ‘ನನ್ನ ಭೂಮಿ, ನನ್ನ ಜನರು’ ಎಂದ ಅಮಿತ್ ಶಾ: ‘ಲೋಕ’ ಗೆಲ್ಲಲು ಕೇಂದ್ರ ಗೃಹಸಚಿವರ ಹೊಸ ತಂತ್ರ

ತಮಿಳುನಾಡು ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಅವರನ್ನು ಗೌರವಿಸಿ ಸನ್ಮಾನಿಸಿದರು.
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಯೋಜಿಸಿದ್ದ ‘ಎನ್ ಮಣ್ ಎನ್ ಮಕ್ಕಳ್’ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಾ ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್ ಮುರುಗನ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಪಸ್ಥಿತರಿದ್ದರು.
ರಾಮೇಶ್ವರಂನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಹಮ್ಮಿಕೊಂಡಿದ್ದ ‘ಎನ್ ಮಣ್ ಎನ್ ಮಕ್ಕಳ್’ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿದ್ದರು. ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಕೇಂದ್ರ ಸಚಿವ ಅಮಿತ್ ಶಾ, ಕಾಂಗ್ರೆಸ್ ಮತ್ತು ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇಂದು ಗೃಹ ಸಚಿವರು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಕುರಿತ ಕೃತಿಯೊಂದನ್ನು ಬಿಡುಗಡೆ ಮಾಡಿದ್ದು, ಬಳಿಕ ರಾಮೇಶ್ವರಂನ ಪೆಯ್ಕರುಂಬುನಲ್ಲಿರುವ ಎಪಿಜೆ ಅಬ್ದುಲ್ ಕಲಾಂ ಅವರ ಮನೆಗೆ ಭೇಟಿ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ್ದಾರೆ. ಜೊತೆಗೆ ಅವರ ಸ್ಮಾರಕಕ್ಕೂ ಭೇಟಿ ನೀಡಿದ್ದು, ಸ್ವಾಮಿ ವಿವೇಕಾನಂದರ ಸ್ಮಾರಕಕ್ಕೆ ಭೇಟಿ ನೀಡಿ, ಬಳಿಕ ಮಂಡಬಮ್‌ನಿಂದ ಮಧುರೈ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್‌ನಲ್ಲಿ ತೆರಳಿದರು.
ರಾಮೇಶ್ವರಂನಿಂದ ಪ್ರಾರಂಭವಾಗುವ ಈ ಪಾದಯಾತ್ರೆ ರಾಜ್ಯಾದ್ಯಂತ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಾಗಲಿದೆ. ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಜನವರಿ 11ರಂದು ಈ ಪಾದಯಾತ್ರೆ ಮುಕ್ತಾಯಗೊಳ್ಳಲಿದೆ. ಈ ಯಾತ್ರೆಯ ನೇತೃತ್ವವನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw