ಇಂದು ಮಂಗಳೂರು ನಗರಕ್ಕೆ ಆಗಮಿಸಲಿರುವ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ 5:20ಕ್ಕೆ ಮಂಗಳೂರು ನಗರದ ಹೊರವಲಯದ ಕೆಂಜಾರುವಿನಲ್ಲಿ ಶ್ರೀದೇವಿ ಕಾಲೇಜಿನಲ್ಲಿ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.
ಈ ಸಭೆಯಲ್ಲಿ ಆರು ಜಿಲ್ಲೆಗಳ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ವಿಧಾನಸಭೆ ಚುನಾವಣೆಗೆ ಮುನ್ನ ಇಂದು ಈ ಪ್ರದೇಶಕ್ಕೆ ಅಮಿತ್ ಶಾ ಅವರ ಮೊದಲ ಭೇಟಿಗೆ ಸ್ವಾಗತಿಸಲು ಆಡಳಿತಾರೂಢ ಬಿಜೆಪಿ ಪಾಳಯದಲ್ಲಿ ಸಿದ್ಧತೆಗಳು ಆಗಿದೆ.
ಅಮಿತ್ ಶಾ ಕ್ಯಾಂಪ್ಕೊದ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು ಆಗಮಿಸಲಿದ್ದಾರೆ. ಧರ್ಮಶ್ರೀ ಪ್ರತಿಷ್ಠಾನ ನಿರ್ಮಿಸಿರುವ ಭಾರತ ಮಾತಾ ಮಂದಿರವನ್ನು ಅವರು ಉದ್ಘಾಟಿಸಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಅವರನ್ನು ಸ್ವಾಗತಿಸಲು ಕೇರಳದ ಕಣ್ಣೂರಿಗೆ ತೆರಳಲಿದ್ದಾರೆ.
ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಶನಿವಾರ ಮಧ್ಯಾಹ್ನ 12:30ಕ್ಕೆ ಹೊರಟು ಕಣ್ಣೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 1:30ಕ್ಕೆ ತಲುಪಲಿದ್ದಾರೆ.
2:15ಕ್ಕೆ ಗೃಹ ಸಚಿವರನ್ನು ಬರಮಾಡಿಕೊಳ್ಳಲಿದ್ದಾರೆ. 2:20ಕ್ಕೆ ಬಿಎಸ್‌ಎಫ್ ಹೆಲಿಕಾಪ್ಟರ್ ಮೂಲಕ ಗೃಹ ಸಚಿವರೊಂದಿಗೆ ಹೊರಟು 2:45ಕ್ಕೆ ಈಶ್ವರಮಂಗಲಕ್ಕೆ ಆಗಮಿಸಲಿದ್ದಾರೆ.
ಪುತ್ತೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ನಗರಾಭಿವೃದ್ಧಿ ಸಚಿವ ಬಿ.ಬಿ. ಬಸವರಾಜ, ಇಂಧನ , ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ದ.ಕ. ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw