ಅಮಿತ್ ಶಾ ಅವರ ರಾಜ್ಯ ಪ್ರವಾಸ ವಿವರ
ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ (2–3–2023) ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಇರುವರು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ತಿಳಿಸಿದ್ದಾರೆ.
ನಾಳೆ (ಮಾರ್ಚ್ 3) ಮಧ್ಯಾಹ್ನ 12.20 ಗಂಟೆಗೆ ಅವರು ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ 3ನೇ ರಥ ಯಾತ್ರೆಯನ್ನು ಉದ್ಘಾಟಿಸುವರು. ಬಳಿಕ 1.15 ಗಂಟೆಗೆ ಬಸವಕಲ್ಯಾಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು.
ಸಂಜೆ 4.50ಕ್ಕೆ ಅವರು ಆವಟಿಯ ಶ್ರೀ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ಕೊಡಲಿದ್ದಾರೆ. 5.10ಕ್ಕೆ ದೇವನಹಳ್ಳಿಯಲ್ಲಿ ವಿಜಯ ಸಂಕಲ್ಪ 4ನೇ ರಥ ಯಾತ್ರೆಯನ್ನು ಉದ್ಘಾಟಿಸಿ, ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ದೆಹಲಿಗೆ ಹಿಂತಿರುಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw