ಅಮಿತ್ ಶಾ ಬಳಿ ರಾಜ್ಯಕ್ಕೆ ಬೇಕಾದದ್ದನ್ನು ಕೇಳುವ ಧೈರ್ಯ ಸಿಎಂ, ಸಂಸದರಿಗೆ ಇಲ್ಲ: ಯು.ಟಿ.ಖಾದರ್
ಮಂಗಳೂರು: ಕೇಂದ್ರದ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದ ವೇಳೆ ಅತಿವೃಷ್ಟಿ ಹಾನಿಯ ಬಗ್ಗೆ ಯಾವುದೇ ಮನವಿ ನೀಡದೆ ಬಿಜೆಪಿಗರು ಜನತೆಗೆ ಅನ್ಯಾಯವೆಸಗಿದ್ದಾರೆ ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಕಿಡಿಕಾರಿದ್ದಾರೆ.
ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜನತೆ ಅತಿವೃಷ್ಟಿಯಿಂದ ತತ್ತರಿಸಿದ್ದರೂ ರಾಜ್ಯ ಸರಕಾರ ಜನರ ಕಣ್ಣೀರು ಒರೆಸುವ ಯೋಜನೆ ಜಾರಿಗೊಳಿಸಿಲ್ಲ ಎಂದು ಟೀಕಿಸಿದರು.
ಕೇಂದ್ರದ ಗೃಹಸಚಿವರು ರಾಜ್ಯಕ್ಕೆ ಭೇಟಿ ನೀಡಿದ ವೇಳೆ ರಾಜ್ಯದ ಸಿಎಂ , ಸಚಿವರು, ಸಂಸದರಿಗೆ ಕೇಂದ್ರ ಸರಕಾರದಲ್ಲಿ ರಾಜ್ಯಕ್ಕೆ ಬೇಕಾದ್ದನ್ನು ಕೇಳುವ ಧೈರ್ಯವಿಲ್ಲ. ಪರಿಣಾಮ ಜಿಲ್ಲೆಯ ಜನತೆ ಅನಾಥವಾಗಿದ್ದಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka