ಅಮಿತ್ ಶಾಗೆ ಶುಭಕೋರಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಫೋಟೋ! - Mahanayaka
4:15 AM Wednesday 11 - December 2024

ಅಮಿತ್ ಶಾಗೆ ಶುಭಕೋರಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಫೋಟೋ!

sumalatha
29/12/2022

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಮಂಡ್ಯಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಂಡ್ಯ ನಗರದಲ್ಲಿ ಫ್ಲೆಕ್ಟ್ ಗಳ ಭರಾಟೆ ಕಂಡು ಬಂದಿದೆ.

ರಸ್ತೆ ಬದಿಗಳಲ್ಲಿ ಬಿಜೆಪಿ ಬಾವುಟಗಳು ಹಾರಾಡುತ್ತಿದ್ದು, ಅಮಿತ್ ಶಾ ಅವರಿಗೆ ಸ್ವಾಗತ ಕೋರಿ ಫ್ಲೆಕ್ಸ್ ಗಳನ್ನು ಹಾಕಲಾಗಿದೆ. ಈ ಫ್ಲೆಕ್ಸ್ ಗಳ ಪೈಕಿ ಮಂಡ್ಯದ ಸ್ವಾಭಿಮಾನಿ ಸಂಸದೆ ಸಮಲತಾ ಫೋಟೋ ಕೂಡ ರಾರಾಜಿಸುತ್ತಿದೆ.

ಸುಮಲತಾ ಆಪ್ತ ಇಂಡವಾಳು ಸಚ್ಚಿದಾನಂದ ಬಿಜೆಪಿ ಸೇರ್ಪಡೆಗೊಂಡಿದ್ದರು. ಇದೀಗ ತಾನು ಅಮಿತ್ ಶಾಗೆ ಶುಭ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಹಾಕಿಕೊಂಡಿದ್ದು, ಈ ಫ್ಲೆಕ್ಸ್ ಗಳು ಸುಮಲತಾ ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಸಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಹೆಲಿಕಾಫ್ಟರ್ ಮೂಲಕ ಅಮಿತ್ ಶಾ ಅವರು ಮಂಡ್ಯಕ್ಕೆ ಆಗಮಿಸಲಿದ್ದಾರೆ.  11:15ರ ಸುಮಾರಿಗೆ ಗೆಜ್ಜಲಗೆರೆಯ ಮನ್ ಮುಲ್ ನ ಮೆಗಾ ಡೈರಿ ಉದ್ಘಾಟನೆ ಮಾಡಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ