ಅಮಿತ್ ಶಾ ಕರ್ನಾಟಕ ಪ್ರವಾಸ | ಜ.16-17ರಂದು ರಾಜ್ಯದ ವಿವಿಧ ಭಾಗಗಳಿಗೆ ಭೇಟಿ - Mahanayaka

ಅಮಿತ್ ಶಾ ಕರ್ನಾಟಕ ಪ್ರವಾಸ | ಜ.16-17ರಂದು ರಾಜ್ಯದ ವಿವಿಧ ಭಾಗಗಳಿಗೆ ಭೇಟಿ

15/01/2021

ಬೆಂಗಳೂರು: ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಜನವರಿ 16 ಮತ್ತು 17ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿನ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದು, ಹಲವು ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬೆಂಗಳೂರು. ಬೆಳಗಾವಿ,  ಬಾಗಲಕೋಟೆ ಮತ್ತು ಭದ್ರಾವತಿಗೆ ಶಾ ಭೇಟಿ ನೀಡಲಿದ್ದಾರೆ. 16ರಂದು ಬೆಂಗಳೂರಿಗೆ ಶಾ ಬರಲಿದ್ದು, ಬಳಿಕ ಭದ್ರಾವತಿಗೆ ತೆರಳಲಿದ್ದಾರೆ. ಭದ್ರಾವತಿಯಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ, ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಆ ಬಳಿಕ ಮತ್ತೆ ಬೆಂಗಳೂರಿಗೆ ಆಗಮಿಸಲಿದ್ದು, ಬೆಂಗಳೂರಿನ ವಿಧಾನಸೌಧಕ್ಕೆ ಅವರು ಭೇಟಿ ನೀಡಿ ತುರ್ತು ಸ್ಪಂದನ ವಾಹನಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಪೊಲೀಸ್ ಕ್ವಾಟ್ರಸ್ ಉದ್ಘಾಟಿಸಲಿದ್ದಾರೆ.

ಎರಡನೇ ದಿನವಾದ ಜನವರಿ 17ರಂದು ಬೆಂಗಳೂರಿನಿಂದ ಬೆಳಗಾವಿಗೆ ತೆರಳಲಿದ್ದಾರೆ. ಬೆಳಗಾವಿಯಿಂದ ಬಾಗಲಕೋಟೆಗೆ ತೆರಳಿ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ  ಮಾಜಿ ಲೋಕಸಭೆ ಸದಸ್ಯ ದಿವಂಗತ ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.


Provided by

ಇತ್ತೀಚಿನ ಸುದ್ದಿ