ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ನೀಡಿದ ಕಟ್ಟುನಿಟ್ಟಿನ ಸೂಚನೆ ಏನು? - Mahanayaka

ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ನೀಡಿದ ಕಟ್ಟುನಿಟ್ಟಿನ ಸೂಚನೆ ಏನು?

amith shah
04/05/2022

ಬೆಂಗಳೂರು: ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ಅವರು, ಮುಂದಿನ ವಿಧಾನ ಸಭಾ ಚುನಾವಣೆ ಗೆಲ್ಲಲು ಬಿಜೆಪಿ ನಾಯಕರಿಗೆ ಹಲವು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.

ಸಂಘಟನೆಗಳ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಮಿತ್ ಶಾ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.  2018ರ ಚುನಾವಣೆಯಲ್ಲಿ 104 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೂ ನೇರ ದಾರಿಯಲ್ಲಿ ಬಿಜೆಪಿಗೆ ಅಧಿಕಾರ ಹಿಡಿಯಲು ಸಾಧ್ಯವಾಗಲಿಲ್ಲ. ಈ ನಡುವೆ ಶಾಸಕರ ಖರೀದಿಯ ಮೂಲಕ ಬಿಜೆಪಿ ಚುನಾವಣೆ ಗೆದ್ದ ಕಳಂಕವನ್ನೂ ಹೊತ್ತಿದೆ. ಕಳೆದ ಬಾರಿ ಚುನಾವಣೆಯಲ್ಲಿ ಕಲಿತ ಪಾಠವನ್ನು ಈ ಬಾರಿ ಪ್ರಯೋಗಿಸಲು ಬಿಜೆಪಿ ಸಜ್ಜಾಗಿದೆ.

ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸಂಘಟನೆ ಕೊರತೆ ಎದುರಿಸುತ್ತಿರುವ ಮೈಸೂರು ಭಾಗಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಬಿಜೆಪಿ ನಾಯಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಹಳೇಮೈಸೂರು ಭಾಗವಾದ ತುಮಕೂರು, ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಂಘಟನೆಯನ್ನು ಬಲಪಡಿಸಬೇಕೆಂದು ತಾಕೀತು ಮಾಡಿದ್ದಾರೆ.

ಪ್ರತೀ ಚುನಾವಣೆಯಲ್ಲೂ ಹಳೆಯ ಮೈಸೂರು ಭಾಗದಲ್ಲಿ ಬಿಜೆಪಿಗೆ ಹಿನ್ನೆಡೆಯಾಗುತ್ತಿದೆ. ಹೀಗಾಗಿ ಬಿಜೆಪಿ ಅಧಿಕ ಸ್ಥಾನದಲ್ಲಿ ಗೆದ್ದರೂ, ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ 2023ರ ಚುನಾವಣೆಯಲ್ಲಿ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಮಾತ್ರವಲ್ಲದೇ ಸ್ವತಂತ್ರವಾಗಿ ಅಧಿಕಾರ ಹಿಡಿಯುವ ಗುರಿಯನ್ನು ಬಿಜೆಪಿ ಹೊಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದೂರು ನೀಡಲು ಬಂದಿದ್ದ ಅತ್ಯಾಚಾರ ಸಂತ್ರಸ್ತೆಯ ಮೇಲೆ ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ!

ಅಂತ್ಯಕ್ರಿಯೆಗೆ ಕೆಲವೇ ನಿಮಿಷ ಇರುವಾಗ ಶವಪೆಟ್ಟಿಗೆಯೊಳಗಿನಿಂದ ಕೇಳಿತು ಬಡಿಯುವ ಶಬ್ದ!

ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಪ್ರತಿಜ್ಞೆ ಸ್ವೀಕರಿಸಿದ ಬಿಜೆಪಿ ಶಾಸಕ

ಟೋಲ್ ಸಂಗ್ರಹ: ಫಾಸ್ಟ್ ಟ್ಯಾಗ್ ವ್ಯವಸ್ಥೆ ಶೀಘ್ರವೇ ರದ್ದು!

ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಬಿ.ಎಲ್.ಸಂತೋಷ್ ಹೇಳಿಕೆ: ಹಾಲಿ ಶಾಸಕರಿಗೂ ಭೀತಿ!

ಇತ್ತೀಚಿನ ಸುದ್ದಿ