ಬೆಳಗಾವಿಯಲ್ಲಿ ಗೃಹಸಚಿವ ಅಮಿತ್ ಶಾಗೆ ರೈತರ ಪ್ರತಿಭಟನೆಯ ಬಿಸಿ
17/01/2021
ಬೆಳಗಾವಿ: ಕರ್ನಾಟಕ ಪ್ರವಾಸದಲ್ಲಿರುವ ಗೃಹಸಚಿವ ಅಮಿತ್ ಶಾ ಅವರಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದೆ. ನೂತನ ಕೃಷಿ ಮಸೂದೆ ವಿರುದ್ಧ ರವಿವಾರ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನನ್ನು ವಿರೋಧಿಸಿದ ರೈತರು ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸಿದರು.
ರೈತರು ಪ್ರತಿಭಟನೆಗೆ ಸಿದ್ಧವಾಗುತ್ತಿದ್ದಂತೆಯೇ ಪೊಲೀಸರು ಅವರನ್ನು ಬಂಧಿಸಲು ಮುಂದಾಗಿದ್ದಾರೆ. ಇದರಿಂದಾಗಿ ಪೊಲೀಸರು ಹಾಗೂ ರೈತರ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.
ಇನ್ನೂ ಪ್ರತಿಭಟನೆಗೆ ಅವಕಾಶ ನೀಡದ ಪೊಲೀಸರ ವಿರುದ್ಧ ರೈತರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ರೈತರ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.