ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಓರ್ವ ಆರೋಪಿ ಅರೆಸ್ಟ್: ಇನ್ನಿಬ್ಬರು ಪರಾರಿ - Mahanayaka

ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಓರ್ವ ಆರೋಪಿ ಅರೆಸ್ಟ್: ಇನ್ನಿಬ್ಬರು ಪರಾರಿ

balehunnuru
07/03/2023

ಚಿಕ್ಕಮಗಳೂರು: ಬಸವನಕೋಟೆ ಮೀಸಲು ಅರಣ್ಯಕ್ಕೆ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ನಾಶವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಕ್ಕೆ ಬೆಂಕಿ ಹಚ್ಚಿದ ಓರ್ವ ಆರೋಪಿಯನ್ನು  ಅರಣ್ಯಾಧಿಕಾರಿಗಳು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ರಘು ಎಂದು ಗುರುತಿಸಲಾಗಿದೆ.  ಕುಮಾರ್ ಹಾಗೂ ವೆಂಕಟೇಶ್ ಎಂಬ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಇವರು ಕಳೆದ ಭಾನುವಾರ ರಾತ್ರಿ ಮೀಸಲು ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದರು ಎನ್ನಲಾಗಿದೆ. ಈ ಸಂಬಂಧ ಬಾಳೆಹೊನ್ನೂರು ಅರಣ್ಯಾಧಿಕಾರಿಗಳು ರಘು ಎಂಬಾತನನ್ನು ಬಂಧಿಸಿದ್ದು, ಇನ್ನಿಬ್ಬರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಸವನಕೋಟೆ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಲಾಗಿತ್ತು. ಇದರಿಂದಾಗಿ ಹತ್ತಾರು ಎಕರೆ ಅರಣ್ಯ  ನಾಶವಾಗಿತ್ತು. ಮೀಸಲು ಅರಣ್ಯದ ಸಮೀಪದಲ್ಲಿದ್ದ  ಅಕ್ಕ ಪಕ್ಕದ ತೋಟಗಳಿಗೂ ಬೆಂಕಿ ಆವರಿಸಿ ಅನಾಹುತ ಸೃಷ್ಟಿಯಾಗಿತ್ತು.


Provided by

ಬೆಂಕಿ ನಂದಿಸಲು ಅರಣ್ಯಾಧಿಕಾರಿಗಳು ತಡ ರಾತ್ರಿಯವರೆಗೂ ಕಾರ್ಯಾಚರಣೆ ನಡೆಸಿದ್ದರು. ಬೆಂಕಿಯಿಂದಾಗಿ ನೂರಾರು ಎಕರೆ ಅರಣ್ಯ ತೋಟ, ಬೆಂಕಿಗಾಹುತಿಯಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ