ಪ್ರಾಚೀನ ಕಾಲದ ಗುಹೆ ಪತ್ತೆ: ಮಡಿಕೆ, ಬಟ್ಟಲು, ಸಣ್ಣ-ಪುಟ್ಟ ಪಾತ್ರೆಗಳ ಅವಶೇಷ ಪತ್ತೆ - Mahanayaka
10:09 AM Saturday 14 - December 2024

ಪ್ರಾಚೀನ ಕಾಲದ ಗುಹೆ ಪತ್ತೆ: ಮಡಿಕೆ, ಬಟ್ಟಲು, ಸಣ್ಣ-ಪುಟ್ಟ ಪಾತ್ರೆಗಳ ಅವಶೇಷ ಪತ್ತೆ

cave
28/08/2022

ಕಡಬ: ಗುಡ್ಡವೊಂದರಲ್ಲಿ ಗುಂಡಿ ತೆಗೆಯುವ ವೇಳೆ ಗುಹೆಯೊಂದು ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ. ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವವರ ಜಮೀನಿನಲ್ಲಿ ಈ ಪ್ರಾಚೀನ ಪರಿಕರಗಳು ಪತ್ತೆಯಾಗಿವೆ.

ರಬ್ಬರ್ ತೋಟ ತೆರವು ಮಾಡಿ ಅಡಿಕೆ ತೋಟದ ಮಾಡುವ ಉದ್ದೇಶದಿಂದ ಜೆಸಿಬಿ ಯಂತ್ರದ ಮೂಲಕ ಅಡಿಕೆ ಗುಂಡಿ ತೆಗೆಯುವಾಗ ಇವು ಕಾಣಸಿಕ್ಕಿವೆ.‌ ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲವಾದ ಭಾಗ ಗೋಚರಿಸಿದ್ದು ಇಲ್ಲಿ ಗುಹೆಯಾಕಾರ ಮಾದರಿ ಪತ್ತೆಯಾಗಿದೆ.‌ ಅದನ್ನು ಸೂಕ್ಷವಾಗಿ ಗಮನಿಸಿದಾಗ ಇದರೊಳಗಡೆ ಮಣ್ಣಿನ ಮಡಿಕೆ, ಬಟ್ಟಲು, ಸಣ್ಣ-ಪುಟ್ಟ ಪಾತ್ರೆಗಳ ಅವಶೇಷಗಳು ಪತ್ತೆಯಾಗಿದೆ.

ವಿಶೇಷ ರೀತಿಯ ಗುಹೆಯಲ್ಲಿ ಎರಡು ಅಂತರದ ಕೋಣೆಗಳಿರುವಂತೆ ಕಂಡುಬಂದಿದೆ. ಅಧ್ಯಯನ ಹಂತದಲ್ಲಿ ಪುರಾತನ ಕಾಲದಲ್ಲಿ ಉದ್ದೇಶಪೂರ್ವಕವಾಗಿ ಸಣ್ಣ ಮಾದರಿಯ ಗುಹೆ ತೋಡಿ ಪರಿಕರಗಳನ್ನು ಇದರಲ್ಲಿ ಹೂತು ಮುಚ್ಚಿರಬಹುದು ಎಂಬ ಮಾತು ಸ್ಥಳೀಯವಾಗಿ ಕೇಳಿಬರುತ್ತಿದೆ.

ಉಡುಪಿಯ ಶಿರ್ವ ಎಂಎಸ್‌ ಆರ್‌ ಎಸ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್, ಪ್ರಾಚ್ಯವಸ್ತು ಸಂಶೋಧಕ ಪ್ರೊ.ಟಿ.ಮುರುಗೇಶಿ ಅವರು ಸ್ಥಳಕ್ಕೆ ಆಗಮಿಸಿ ಪರಿಕರಗಳನ್ನು ಸಂಗ್ರಹಿಸಿ, ಅಧ್ಯಯನ ನಡೆಸುತ್ತಿದ್ದಾರೆ.

ಈಗಾಗಲೇ ಪರಿಕರಗಳನ್ನು ತೊಳೆದು ಸ್ವಚ್ಚಗೊಳಿಸಿದ್ದೇವೆ ಮುಂದಿನ ದಿನಗಳಲ್ಲಿ ಇದರ ಬಗ್ಗೆ ಮಾಹಿತಿ ನೀಡುವುದಾಗಿ ಅವರು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ