ಶಾಲೆಯಲ್ಲಿ ಬಾಂಬ್ ಇರಿಸಿರುವುದಾಗಿ ಇ—ಮೇಲ್: ಸಿಬ್ಬಂದಿಯನ್ನು ಹೊರಕಳಿಸಿ ಪೊಲೀಸರಿಂದ ಶೋಧ - Mahanayaka
6:11 AM Thursday 12 - December 2024

ಶಾಲೆಯಲ್ಲಿ ಬಾಂಬ್ ಇರಿಸಿರುವುದಾಗಿ ಇ—ಮೇಲ್: ಸಿಬ್ಬಂದಿಯನ್ನು ಹೊರಕಳಿಸಿ ಪೊಲೀಸರಿಂದ ಶೋಧ

banglore
09/05/2023

ಬೆಂಗಳೂರು: ಶಾಲೆಯಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದ ಪ್ರಕರಣ ಆನೇಕಲ್ ನಲ್ಲಿ ಮಂಗಳವಾರ ನಡೆದಿದೆ.

ತಾಲೂಕಿನ ಹೆಬ್ಬಗೋಡಿಯ ಖಾಸಗಿ ಶಾಲೆಯೊಂದರ ಇ-ಮೇಲ್ ವಿಳಾಸಕ್ಕೆ ಬಾಂಬ್ ಬೆದರಿಕೆ ಬಂದಿದೆ. ಆತಂಕಗೊಂಡ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದಿರುವ ಹೆಬ್ಬಗೋಡಿ ಪೊಲೀಸರು ಸಿಬ್ಬಂದಿಯನ್ನು ಹೊರಕ್ಕೆ ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಬೆದರಿಕೆ ಇ-ಮೇಲ್ ಬಂದಿದೆ. ಕೂಡಲೇ ದಾಖಲಾತಿ ಪ್ರಕ್ರಿಯೆ ನಿಲ್ಲಿಸಿ, ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ಸಿಬ್ಬಂದಿ ತಿಳಿಸಿದ್ದಾರೆ. ಕೆಲ ತಿಂಗಳ ಹಿಂದೆ ಸಹ ಶಾಲೆಗೆ ಇಂತಹ ಬೆದರಿಕೆ ಇ-ಮೇಲ್ ಬಂದಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ