ಸರ್ಕಾರಿ ಬಸ್‌ ನ್ನು ಅರ್ಧ ಗಂಟೆಗಳ ಕಾಲ ರಸ್ತೆಯಲ್ಲೇ ತಡೆದು ನಿಲ್ಲಿಸಿದ ಒಂಟಿ ಸಲಗ! - Mahanayaka
6:03 AM Wednesday 23 - October 2024

ಸರ್ಕಾರಿ ಬಸ್‌ ನ್ನು ಅರ್ಧ ಗಂಟೆಗಳ ಕಾಲ ರಸ್ತೆಯಲ್ಲೇ ತಡೆದು ನಿಲ್ಲಿಸಿದ ಒಂಟಿ ಸಲಗ!

elephant
13/06/2024

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆಯೊಂದು ಸುಮಾರು ಅರ್ಧ ಗಂಟೆಗಳವರೆಗೆ ರಸ್ತೆ ಅಡ್ಡವಾಗಿ ನಿಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ನಡೆದಿದೆ.

ಕಳೆದ ಎರಡು ತಿಂಗಳಿಂದಲೂ ಚಾರ್ಮಾಡಿಯಲ್ಲೇ ಇರೋ ಈ ಸಲಗ ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಗ್ರಾಮದೊಳಕ್ಕೂ ಈ ಆನೆ ಎಂಟ್ರಿ ನೀಡಿ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹೀಗಾಗಿ ಈ ಆನೆಯನ್ನು ಸ್ಥಳಾಂತರಿಸಬೇಕು ಎನ್ನುವ ಒತ್ತಾಯ ಕೂಡ ಕೇಳಿ ಬಂದಿದೆ.

ಇದೀಗ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಏಕಾಏಕಿ ಬಸ್ಸಿಗೆ ಕಾಡಾನೆ ಅಡ್ಡ ಸಿಕ್ಕಿದೆ.  ಆನೆಯನ್ನು ಕಂಡು ಬಸ್‌ ಚಾಲಕ ಬಸ್‌ ನಿಲ್ಲಿಸಿದ್ದಾರೆ.

ಆನೆ ರಸ್ತೆಗೆ ಅಡ್ಡವಾಗಿ ನಿಂತಿದ್ದ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು.  ಚಿಕ್ಕಮಗಳೂರು–ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅರ್ಧ ಗಂಟೆ ಬಳಿಕ ಒಂಟಿ ಸಲಗ ಅರಣ್ಯಕ್ಕೆ ಇಳಿದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ