ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಯೋಜನೆಯ ವಿರುದ್ಧ ಚೆಂಡು ಹೂವು ಮುಡಿಸಿಕೊಂಡು ವಿನೂತನ ಪ್ರತಿಭಟನೆ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ತನ್ನ 5 ಗ್ಯಾರಂಟಿಗಳನ್ನು ನೇರವಾಗಿ ನೀಡದೆ ಅನೇಕ ಷರತ್ತುಗಳನ್ನು ವಿಧಿಸಿ ರಾಜ್ಯದ ಜನರ ಕಿವಿಗಳಿಗೆ ಹೂವನ್ನು ಮುಡಿಸುವ ಮೂಲಕ ಪರಮ ಅನ್ಯಾಯ ಮತ್ತು ಮೋಸವನ್ನು ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿದರು.
ಆಮ್ ಆದ್ಮಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ಮಾದರಿಯಲ್ಲಿ ಯಾವುದೇ ಷರತ್ತುಗಳಿಲ್ಲದೆ 200 ಯೂನಿಟ್ ವಿದ್ಯುತ್ ನೀಡಲಾಗದೆ ಅನೇಕ ಷರತ್ತುಗಳನ್ನು ವಿಧಿಸಿ ಬಡವರು ಬಡವರಾಗಿ ಇರುವಂತಹ ಗ್ಯಾರಂಟಿಯನ್ನು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಜನ ವಿರೋಧಿ ನೀತಿಯನ್ನು ವಿರೋಧಿಸಿ 9-6-2023 ರ ಶುಕ್ರವಾರದಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೋಹನ್ ದಾಸರಿ ತಿಳಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹಮದ್ನಿ ಪಕ್ಷದ ಕಾರ್ಯಕರ್ತರು ಚೆಂಡು ಹೂವು ಮುಡಿಸಿಕೊಂಡು ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆಯನ್ನು ಮಾಡಲಿದ್ದಾರೆಂದು ಮಾಧ್ಯಮ ಮಿತ್ರರಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬಹುಮತ 40% ಕಮಿಷನ್ ಹಾಗೂ ಜನ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ನೀಡಿದ ಮತವೆ ಹೊರತು ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಮತವಲ್ಲ. ಈ ಇಂದಿನ ಅಧಿಕಾರವಧಿಯಲ್ಲಿ ಮಾಡಿದ್ದಂತಹ ಅನೇಕ ಭ್ರಷ್ಟಾಚಾರ ಪ್ರಕರಣಗಳು ಹಾಗೂ ಜನ ವಿರೋಧಿ ನೀತಿಯನ್ನು ಮತ್ತೊಮ್ಮೆ ಮುಂದುವರಿಸಿದಲ್ಲಿ ಜನತೆ ತಕ್ಕ ಪಾಠವನ್ನು ಕಲಿಸಿಕೊಡುತ್ತದೆ ಎಂದು ಎಚ್ಚರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯವು ಈಗಾಗಲೇ ಎಲ್ಲವನ್ನೂ ನೀಡಿದೆ. ಇವರು ರಾಜ್ಯದ ಜನತೆಗೆ ಮರಳಿ ನೀಡಿ ಋಣವನ್ನು ತೀರಿಸಿಕೊಳ್ಳುವಂತಹ ಅವಕಾಶವಿರುವಾಗ ಪ್ರಾಮಾಣಿಕವಾಗಿ ಯೋಜನೆಗಳನ್ನು ಜಾರಿಗೊಳಿಸಿ ಎಂದು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw