ಚುನಾವಣೆ ಹೊತ್ತಲ್ಲೇ ಬಿಜೆಪಿ ಶಾಸಕರದ್ದೆನ್ನಲಾದ ಅಶ್ಲೀಲ ಫೋಟೋ ವೈರಲ್: ಮಹಿಳೆಯಿಂದ ಸ್ಪಷ್ಟನೆ

ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮಹಿಳೆಯೊಬ್ಬರ ಫೋಟೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಫೋಟೋದಲ್ಲಿರುವ ಮಹಿಳೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, ತನಗೂ ಶಾಸಕರಿಗೂ ಯಾವುದೇ ಸಂಬಂಧವಿಲ್ಲ, ಆದರೆ ಫೋಟೋ ಎಡಿಟ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಶಾಸಕರನ್ನು ಭೇಟಿ ಮಾಡುವಂತಹ ಪ್ರಸಂಗವೇ ಬಂದಿಲ್ಲ, ನನ್ನ ಫೋಟೋವನ್ನು ತೆಗೆದು ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ನನ್ನ ಫೋಟೋ ದುರುಪಯೋಗಪಡಿಸಲಾಗಿದೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆಯ ವಿರುದ್ಧ ಇಷ್ಟೊಂದು ದೊಡ್ಡಮಟ್ಟದ ಆರೋಪ ಮಾಡುವುದು ಸರಿಯಲ್ಲ, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಇದನ್ನೆಲ್ಲ ಯಾರು ಮಾಡಿದ್ದಾರೆ ಅವರಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಅವರು ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇನ್ನೂ ಶಾಸಕರು ಕೂಡ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಫೋಟೋ ವೈರಲ್ ಆಗುತ್ತಿದ್ದು, ವೈರಲ್ ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಇನ್ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಪ್ರಕಾರ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲೇ ಇಂತಹದ್ದೊಂದು ಕೃತ್ಯ ಎಸಗಲಾಗಿದ್ದು, ಶಾಸಕರಿಗೆ ಈ ಬಾರಿ ಟಿಕೆಟ್ ತಪ್ಪಿಸುವ ಹುನ್ನಾರ ಇದಾಗಿದೆ. ಈ ಕೃತ್ಯದ ಹಿಂದೆ ರಾಜಕೀಯ ಉದ್ದೇಶಗಳು ಇರಬಹುದೇ ಎಂಬ ಹಲವು ಅನುಮಾನಗಳು ಕೂಡ ಇದೀಗ ಕೇಳಿ ಬಂದಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EOUjVqy3Mmp66N4bRSBoht
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw