ಹಳೆ ವೈಷಮ್ಯ: ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ
09/12/2023
ಮಂಡ್ಯ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದಲ್ಲಿ ನಡೆದಿದೆ.
ಯೋಗೇಶ್(34) ಹತ್ಯೆಗೀಡಾದವರಾಗಿದ್ದಾರೆ. ನಿನ್ನೆ ತಡರಾತ್ರಿ ವೇಳೆ ಇವರನ್ನು ಹರಿತವಾದ ಆಯುಧದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಕೆಆರ್ ಎಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.