5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ವೃದ್ಧ, ಪೊಲೀಸರಿಗೆ ಹೆದರಿ ಆತ್ಮಹತ್ಯೆಗೆ ಶರಣು - Mahanayaka

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ವೃದ್ಧ, ಪೊಲೀಸರಿಗೆ ಹೆದರಿ ಆತ್ಮಹತ್ಯೆಗೆ ಶರಣು

stop rape
07/10/2023

ಲಕ್ನೋ: ಆಟವಾಡುತ್ತಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ ವೃದ್ಧನೋರ್ವ ಪೊಲೀಸರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.


Provided by

ಫರೀದ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 60 ವರ್ಷ ವಯಸ್ಸಿನ ಶೇಕ್ ಮೊಹಮ್ಮದ್ ಎಂಬಾತ ಕೃತ್ಯ ಎಸಗಿದ ವ್ಯಕ್ತಿಯಾಗಿದ್ದಾನೆ.

ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿ ನಾಪತ್ತೆಯಾಗಿದ್ದು, ಹೀಗಾಗಿ ಆತಂಕಗೊಂಡ ಪೋಷಕರು ಹುಡುಕಾಟ ನಡೆಸಿದ್ದಾರೆ.  ಈ ವೇಳೆ ಮೊಹಮ್ಮದ್ ನ ಮನೆಯಲ್ಲಿ ಬಾಲಕಿಯನ್ನು ಬಲವಂತವಾಗಿ ಆರೋಪಿ ಅತ್ಯಾಚಾರ ಎಸಗುತ್ತಿರುವುದು ಕಂಡು ಬಂದಿದೆ. ಬಾಲಕಿಯು ರಕ್ತಸಿಕ್ತ ಸ್ಥಿತಿಯಲ್ಲಿರುವ ದೃಶ್ಯ ಪೋಷಕರನ್ನು ಬೆಚ್ಚಿಬೀಳಿಸಿದೆ. ಬಾಲಕಿಯ ಪೋಷಕರನ್ನು ಕಂಡ ಆರೋಪಿ ಸ್ಥಳದಿಂದ ಪರಾರಿಯಾಗಿದ್ದನು.


Provided by

ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಆರೋಪಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಾಗಿ ಶೋಧ ನಡೆಸಿದ್ದು, ಈ ನಡುವೆ ಆರೋಪಿಯ ಮೃತದೇಹ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪೊಲೀಸರ ಭೀತಿ ಅಥವಾ ತನ್ನ ಕೃತ್ಯದ ಪಶ್ಚಾತಾಪದಿಂದ ಆರೋಪಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ