ಆನಂದ್ ಸಿಂಗ್, ಕಂಪ್ಲಿ ಗಣೇಶ್ ಎಣ್ಣೆ ಏಟು: ಕೊನೆಗೂ ಪ್ರಕರಣ ರಾಜಿಯಲ್ಲಿ ಇತ್ಯರ್ಥ
ಬೆಂಗಳೂರು: ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಸಚಿವ ಆನಂದ್ ಸಿಂಗ್ ಹಾಗೂ ಶಾಸಕ ಕಂಪ್ಲಿ ಗಣೇಶ್ ನಡುವೆ ನಡೆದಿದ್ದು ಎಣ್ಣೆ ಏಟಿನ ಹೊಡೆದಾಟ ರಾಜ್ಯದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಈ ಪ್ರಕರಣ ಕೊನೆಗೂ ರಾಜಿಯಲ್ಲಿ ಮುಕ್ತಾಯವಾಗಿದೆ.
ಇದು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವಾಗಿತ್ತು. ಕೊಲೆ ಯತ್ನದ ಉದ್ದೇಶ ಇರಲಿಲ್ಲ. ಹಾಗಾಗಿ ಇಬ್ಬರು ಕೂಡ ರಾಜಿ ಮಾಡಿಕೊಳ್ಳಲು ಒಪ್ಪಿದ್ದಾರೆ. ಇದಕ್ಕೆ ಕೊಲೆ ಯತ್ನದ ಸೆಕ್ಷನ್ ಅನ್ವಯವಾಗುವುದಿಲ್ಲ ಎಂದು ಕಂಪ್ಲಿ ಗಣೇಶ್ ಪರ ವಕೀಲ ಎ.ಎಸ್.ಪೊನ್ನಣ್ಣ ವಾದಿಸಿದರು. ಈ ವಾದವನ್ನು ಒಪ್ಪಿದ ಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿದೆ.
2019ರ ಜನವರಿ 19ರಂದು ಬಿಡದಿಯ ಈಗಲ್ಟನ್ ರೆಸಾರ್ಟ್ ಬಳಿಯಲ್ಲಿ ನಡೆದ ಘಟನೆಯಲ್ಲಿ ಆನಂದ್ ಸಿಂಗ್ ಹಾಗೂ ಕಂಪ್ಲಿ ಗಣೇಶ್ ನಡುವೆ ಮಾರಾಮಾರಿ ನಡೆದಿತ್ತು. ಪರಿಣಾಮವಾಗಿ ಆನಂದ್ ಸಿಂಗ್ ತೀವ್ರವಾಗಿ ಗಾಯಗೊಂಡಿದ್ದರು. ಈ ಸಂಬಂಧ ಗಣೇಶ್ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಬಳಿಕ ಜಾಮೀನಿನಲ್ಲಿ ಅವರು ಬಿಡುಗಡೆಯಾಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ರೈಲಿನಲ್ಲಿ ಅಪ್ರಾಪ್ತೆಗೆ ಮೇಲೆ ಲೈಂಗಿಕ ಕಿರುಕುಳ ನಡೆಸಿದವನಿಗೆ 5 ವರ್ಷ ಜೈಲು ಶಿಕ್ಷೆ
ಆರ್ಯನ್ ಖಾನ್ ಜೊತೆಗೆ ರೇವ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಮಾಡೆಲ್ ಯಾರು ಗೊತ್ತಾ?
ವಿಶ್ವಾದ್ಯಂತ ವಾಟ್ಸಾಪ್, ಫೇಸ್ ಬುಕ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣ ಸ್ಥಗಿತ!
ಮೀನುಗಾರರ ಬಲೆಗೆ ಬಿತ್ತು ಬೃಹತ್ ಗಾತ್ರದ ಹೆಲಿಕಾಫ್ಟರ್ ಮೀನು!
ಕಾಂಗ್ರೆಸ್ ಗೆ ಭವಿಷ್ಯವಿಲ್ಲ, ರಾಷ್ಟ್ರಮಟ್ಟದಲ್ಲಿ ಒಡೆದು ಚೂರಾಗುತ್ತಿದೆ | ಸಚಿವ ಅಶ್ವಥ್ ನಾರಾಯಣ್
ಉತ್ತರ ಪ್ರದೇಶದಲ್ಲಿ ರಾಮ ರಾಜ್ಯವಿಲ್ಲ, ಕೊಲೆಗಡುಕ ಸರ್ಕಾರವಿದೆ: ಮಮತಾ ಬ್ಯಾನರ್ಜಿ ಕಿಡಿ
ಬಿಜೆಪಿ ತನ್ನ ತಾಲಿಬಾನಿ ಮನಸ್ಥಿತಿಯನ್ನು ಬೆತ್ತಲು ಮಾಡಿಕೊಂಡಿದೆ | ಯೋಗಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗು
ಜ್ಯೂಸ್ ಎಂದು ಭಾವಿಸಿ ತಾತನ ಬ್ರಾಂಡಿ ಕುಡಿದ 5 ವರ್ಷದ ಬಾಲಕ, ತಾತ ಇಬ್ಬರೂ ಸಾವು