ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಶರಣು
01/09/2022
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆಯ ಮಾಡಿನ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಶಿರ್ವ ಗ್ರಾಮದ ತೊಟ್ಲಗುರಿ ಎಂಬಲ್ಲಿ ಆ.31ರಂದು ಬೆಳಕಿಗೆ ಬಂದಿದೆ.
ಮೃತರನ್ನು ಶಿರ್ವ ಗ್ರಾಮದ ತೊಟ್ಲಗುರಿ ನಿವಾಸಿ 40ವರ್ಷದ ರಮೇಶ ಎಂದು ಗುರುತಿಸಲಾಗಿದೆ. ಇವರು ಪೀಡ್ಸ್ ಖಾಯಿಲೆಯಿಂದ ಬಳಲುತ್ತಿದ್ದರು.
ಇವರು ಇದೇ ಚಿಂತೆಯಲ್ಲಿ ನಿನ್ನೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮಾಡಿನ ಮರದ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka