ನಾಲ್ಕು ಅನಾಥ ಶವಗಳ ಅಂತ್ಯಸಂಸ್ಕಾರ ನಡೆಸಿದ ನಾಗರಿಕ ಸಮಿತಿಯ ಕಾರ್ಯಕರ್ತರು - Mahanayaka
2:20 PM Thursday 12 - December 2024

ನಾಲ್ಕು ಅನಾಥ ಶವಗಳ ಅಂತ್ಯಸಂಸ್ಕಾರ ನಡೆಸಿದ ನಾಗರಿಕ ಸಮಿತಿಯ ಕಾರ್ಯಕರ್ತರು

udupi news
18/08/2022

ಉಡುಪಿ: ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಹಲವು ದಿನಗಳಿಂದ ರಕ್ಷಿಸಿಡಲಾಗಿದ್ದ, ವಾರಸುದಾರರು ಇಲ್ಲದ ನಾಲ್ಕು ಪುರುಷ ಶವಗಳ ಅಂತ್ಯಸಂಸ್ಕಾರವು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ಬೀಡಿನಗುಡ್ಡೆಯ ಹಿಂದುರುದ್ರ ಭೂಮಿಯಲ್ಲಿ ಗುರುವಾರ ಗೌರವಯುತವಾಗಿ ನಡೆಸಿದರು.

ಈ ನಾಲ್ಕು ಶವಗಳ ಅಂತ್ಯಸಂಸ್ಕಾರದೊಂದಿಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಇದುವರೆಗೆ 200  ಅನಾಥ ಶವಗಳ ಅಂತ್ಯಸಂಸ್ಕಾರ ನಡೆಸಿದಂತಾಗಿದೆ.

ವಿಷಯ ತಿಳಿದು ರುದ್ರಭೂಮಿಗೆ ಬಂದ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ, ಹಿರಿಯ ನ್ಯಾಯಾಧೀಶೆ ಶರ್ಮಿಳಾ ಎಸ್.  ಅವರು, ಮೃತ ದೇಹಗಳಿಗೆ ಹೂ ಮಾಲೆ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿ, ಶವಸಂಸ್ಕಾರದಲ್ಲಿಯೂ ಭಾಗಿಯಾದರು.

ನಗರ ಪೋಲಿಸ್ ಠಾಣೆಯ ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು, ಮಣಿಪಾಲ ಪೋಲಿಸ್ ಠಾಣೆ ಸಿಬ್ಬಂದಿಗಳಾದ ಉಮೇಶ್, ಉಮೇಶ್ ಯಾದವ್ ಕಾನೂನು ಪ್ರಕ್ರಿಯೆ ನಡೆಸಿದರು. ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸಹಸಂಚಾಲಕ ತಾರಾನಾಥ ಮೇಸ್ತ ಶಿರೂರು, ಸಮಿತಿಯ ಕಾರ್ಯಕರ್ತರಾದ ಪ್ರದೀಪ್ ಅಜ್ಜರಕಾಡು, ಸಂದೇಶ್, ಶಿವಾನಂದ, ಸೌರಭ್ ಬಲ್ಲಾಳ್, ಮೊದಲಾದವರು ಅಂತ್ಯಸಂಸ್ಕಾರ ಕಾರ್ಯದಲ್ಲಿ ಭಾಗಿಯಾಗಿದ್ದರು. ಜಿಲ್ಲಾಸ್ಪತ್ರೆ, ನಗರಸಭೆ, ಫ್ಲವರ್ ವಿಷ್ಣು, ಅಣ್ಣಪ್ಪ ಪುಜಾರಿ ಕರಂಬಳ್ಳಿ, ಸುಶೀಲಾ ರಾವ್ ಸಹಕರಿಸಿದರು.

ಇರ್ವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ರೋಗಿಗಳಾಗಿದ್ದರು. ಒಂದು ನೀರಿನ ಗುಂಡಿಯಲ್ಲಿ ಬಿದ್ದು ಮೃತಪಟ್ಟವನ ಶವ ಮತ್ತು ಇನ್ನೊಂದು ದೊಡ್ಡಣಗುಡ್ಡೆ ರೈಲು ಹಳಿಯಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಶವವಾಗಿತ್ತು. ನಾಲ್ಕು ಅಪರಿಚಿತ ಶವಗಳ ವಾರಸುದಾರರ ಬರುವಿಕೆಗೆ ಮಾಧ್ಯಮ ಪ್ರಕಟಣೆ ನೀಡಲಾಗಿತ್ತು. ಕಾಲಮಿತಿ ಕಳೆದರೂ ಮೃತರ ವಾರಸುದಾರರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಿರಲಿಲ್ಲ. ನಂತರ ಕಾನೂನಿನಂತೆ ಅಂತ್ಯಸಂಸ್ಕಾರ ನಡೆಸಲಾಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ