ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು | ಈಗಲೇ ಅರ್ಜಿ ಸಲ್ಲಿಸಿ

22/12/2020

ಬೆಂಗಳೂರು: ಭಾರತೀಯ ಅಂಚೆ ಇಲಾಖೆಯು 2443 ಗ್ರಾಮೀಣ ದಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು,  ಎಸೆಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಮತ್ತು ಕಂಪ್ಯೂಟರ್ ಜ್ಞಾನ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

12ರಿಂದ 14 ಸಾವಿರ ರೂಪಾಯಿಗಳ ವರೆಗೆ ವೇತನ ಘೋಷಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 20, 2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅಭ್ಯರ್ಥಿಗಳು ಎಸೆಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಇದಲ್ಲದೇ ಸೈಕ್ಲಿಂಗ್ ಅಥವಾ ಮೋಟರ್ ಸೈಕಲ್ ಚಲಾಸಲು ತಿಳಿದಿರಬೇಕು ಎಂದು ಪ್ರಕಟಣೆ ತಿಳಿಸಿದೆ. ಅರ್ಜಿ ಸಲ್ಲಿಸುವ ಸಂದರ್ಭ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರೂ. ಇತರ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಇತ್ತೀಚಿನ ಸುದ್ದಿ

Exit mobile version